ಭಾನುವಾರ, ಏಪ್ರಿಲ್ 18, 2021
31 °C

ನಾಳೆಯಿಂದ ವಿವಿಯಲ್ಲಿ ಧರಣಿ ಶುರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಮಹಿಳಾ ಅಧ್ಯಯನ ವಿಭಾಗದಲ್ಲಿ ಸ್ನಾತಕೋತ್ತರ ಪದವಿಧರರನ್ನು ನೇಮಕಾತಿ ಮಾಡಿಕೊಳ್ಳುವಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿರುವುದನ್ನು ವಿರೋಧಿಸಿ ಸೋಮವಾರ ಗುಲ್ಬರ್ಗ ವಿಶ್ವವಿದ್ಯಾಲಯದ ಕಾರ್ಯಸೌಧದ ಎದುರು ಅನಿರ್ಧಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಮಹಿಳಾ ಅಧ್ಯಯನ ವಿದ್ಯಾರ್ಥಿ ಒಕ್ಕೂಟದ  ಅಧ್ಯಕ್ಷ ಡಾ. ಜೈ ಭೀಮ ಧರ್ಗಿ ತಿಳಿಸಿದರು.ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಗುಲ್ಬರ್ಗ, ಹಂಪಿ, ಮೈಸೂರು, ಬೆಂಗಳೂರು ಹಾಗೂ ವಿಜಾಪುರ ವಿಶ್ವವಿದ್ಯಾಲಯಗಳಲ್ಲಿ ಈ ವಿಷಯವಿದ್ದು, ಮಹಿಳಾ ಅಧ್ಯಯನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದ ಯಾವೊಬ್ಬ ಅಭ್ಯರ್ಥಿಯನ್ನೂ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಸಂದರ್ಭದಲ್ಲಿ ಪ್ರಾತಿನಿಧ್ಯ ನೀಡದಿರುವುದು ಶಿಕ್ಷಣ ಕ್ಷೇತ್ರದ ದುರಂತ ಎಂದು ವಿಷಾದ ವ್ಯಕ್ತಪಡಿಸಿದರು.ಮಹಿಳಾ ಅಧ್ಯಯನಕ್ಕೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾನ್ಯತೆ  ನೀಡಿದ್ದರೂ ನೇಮಕಾತಿ ಪ್ರಕ್ರಿಯೆಯಲ್ಲಿ ಪರಿಗಣಿಸದಿರುವುದು ಸರಿಯಲ್ಲ. ಈ ಕುರಿತು ಉನ್ನತ ಶಿಕ್ಷಣ ಸಚಿವರಾಗಿದ್ದ ಡಾ. ವಿ.ಎಸ್. ಆಚಾರ್ಯ ಅವರು ಮೂರು ತಿಂಗಳ ಕಾಲಾವಕಾಶ ಕೇಳಿ ಭರವಸೆ ನೀಡಿದ್ದರು. ಆದರೆ ಇಲ್ಲಿವರೆಗೆ ಈ ಕುರಿತು ಯಾವುದೇ ನಿರ್ಣಯವಾಗಿಲ್ಲ ಎಂದು ಆಪಾದಿಸಿದರು.ಈವರೆಗೆ ರಾಜ್ಯದಲ್ಲಿ ಸುಮಾರು ಐದು ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಮಹಿಳಾ ಅಧ್ಯಯನ ವಿಭಾಗದಲ್ಲಿ ಸ್ನಾತಕೋತ್ತರ  ಪದವಿ ಪಡೆದಿದ್ದರೂ ಅಂಥವರಿಗೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಿಲ್ಲ. ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಸುಮಾರು 15 ವರ್ಷದಿಂದ ಈ ಕೋರ್ಸ್ ಆರಂಭವಾಗಿ ನೂರಾರು ವಿದ್ಯಾರ್ಥಿಗಳು ಪದವಿ ಪಡೆದಿದ್ದರೂ ಈವರೆಗೆ ಯಾವೊಬ್ಬ ಅಭ್ಯರ್ಥಿಯನ್ನೂ ನೇಮಕಾತಿಯಲ್ಲಿ ಪರಿಗಣಿಸಿಲ್ಲ ಎಂದ ಮೇಲೆ ಈ ಕೋರ್ಸ್ ಅನ್ನು ಆರಂಭಿಸಿರುವುದಾದರೂ ಯಾತಕ್ಕೆ? ಎಂದು ಪ್ರಶ್ನಿಸಿದರು.ಮಹಿಳಾ ಅಧ್ಯಯನ ಸ್ನಾತಕೋತ್ತರ ಪದವೀಧರರಿಗೆ ಸರ್ಕಾರದ ವಿವಿಧ ಇಲಾಖೆಯ ನೇಮಕಾತಿಯಲ್ಲಿ ಅರ್ಹತೆ ಒದಗಿಸಬೇಕು, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚಲ್ಲಾಟವಾಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದರು.ಪ್ರಕಾಶ ಹಾಗರಗಿ, ಡಾ. ಪ್ರಕಾಶ ಹುಗ್ಗಿ, ಭೀಮನಗೌಡ ಪರಗೊಂಡ, ಡಾ. ಸೂರ್ಯಕಾಂತ ಎಸ್. ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.