ಸೋಮವಾರ, ಜನವರಿ 27, 2020
27 °C

ನಾಳೆ ಅಂಗವಿಕಲರ ಜಾಗೃತಿ ಅಭಿಯಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಕರ್ನಾಟಕ ವಾಯ್ಸ್‌ ಆಫ್‌ ಫಿಸಿಕಲಿ ಹ್ಯಾಂಡಿಕ್ಯಾಪ್ಡ್‌ ಸಂಸ್ಥೆಯ ವತಿಯಿಂದ ಇದೇ ಶನಿವಾರ (ಡಿ. 21) ಅಂಗವಿಕಲರ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎನ್‌.ಸುಧೀಂದ್ರ ಹೇಳಿದರು.



ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣ­ದಲ್ಲಿ ಕಾರ್ಯಕ್ರಮ  ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ   ಉದ್ಘಾಟಿಸಲಿದ್ದಾರೆ ಎಂದರು.



ರಾಜ್ಯದ ವಿವಿಧ ಜಿಲ್ಲೆಗಳಿಂದ 10 ಸಾವಿರಕ್ಕೂ ಹೆಚ್ಚು ಅಂಗವಿಕಲರು ಭಾಗವಹಿಸಲಿದ್ದಾರೆ ಎಂದರು.



ಅಂಗವಿಕಲರಿಗೆ ಪ್ರತ್ಯೇಕ ಸಚಿವಾ­ಲಯ ಸ್ಥಾಪಿಸಬೇಕು, ವಿವಿಧ ಕ್ಷೇತ್ರಗಳಲ್ಲಿ ರಾಜ್ಯ ಪ್ರಶಸ್ತಿ ಪಡೆದ ಅಂಗವಿಕಲರಿಗೆ ಪ್ರತಿ ತಿಂಗಳು ರೂ10 ಸಾವಿರ ಗೌರವಧನ ನೀಡಬೇಕು, ವಿವಿಧ  ಇಲಾಖೆಗಳಲ್ಲಿ ದಿನಗೂಲಿ, ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಅಂಗವಿಕಲರ ಕಾಯಂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು ಎಂದರು.

ಪ್ರತಿಕ್ರಿಯಿಸಿ (+)