ನಾಳೆ ಕೆಂಪೇಗೌಡ ಸೇವಾ ಸಂಘ ಉದ್ಘಾಟನೆ
ದೊಡ್ಡಬಳ್ಳಾಪುರ: ನಗರದಲ್ಲಿ ನೂತನವಾಗಿ ಆರಂಭಗೊಂಡಿರುವ ನಾಡಪ್ರಭು ಕೆಂಪೇಗೌಡ ಸೇವಾ ಸಂಘದ ಉದ್ಘಾಟನಾ ಸಮಾರಂಭ ಮಾ.22ರಂದು ಬೆಳೆಗ್ಗೆ 10.30 ಕ್ಕೆ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ.
ಆದಿ ಚುಂಚನಗಿರಿ ಶಾಖಾ ಮಠದ ಶ್ರೀನಿರ್ಮಲಾನಂದ ಸ್ವಾಮಿ ದಿವ್ಯಸಾನಿಧ್ಯ ವಹಿಸಲಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಆಧ್ಯಕ್ಷ ಬೊ.ಕೆಂಚಪ್ಪಗೌಡ ಉದ್ಘಾಟಿಸಲಿದ್ದಾರೆ. ಸಂಘದ ತಾಲ್ಲೂಕು ಅಧ್ಯಕ್ಷ ಎಚ್.ಚಂದ್ರಪ್ಪ, ನ್ಯಾಯವಾದಿ ಸಿ.ಎಚ್.ಹನುಮಂತರಾಯ, ತಾ.ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಕೃಷ್ಣಪ್ಪ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.