ನಾಳೆ ಚಲನಚಿತ್ರ ಪ್ರದರ್ಶನ ಬಂದ್

7

ನಾಳೆ ಚಲನಚಿತ್ರ ಪ್ರದರ್ಶನ ಬಂದ್

Published:
Updated:

ಗದಗ:  ಚಲನಚಿತ್ರಗಳ ಪ್ರದರ್ಶನದ ಮೇಲೆ ಕೇಂದ್ರ ಸರ್ಕಾರ ಸೇವಾ ತೆರಿಗೆ ವಿಧಿಸಿರುವುದನ್ನು ವಿರೋಧಿಸಿ ಇದೇ 23ರಂದು ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಪ್ರದರ್ಶನವನ್ನು ಸ್ಥಗಿತಗೊಳಿಸಲಾಗುವುದು ಎಂದು ರಾಜ್ಯ ಚಲನಚಿತ್ರ ಪ್ರದರ್ಶಕರ ಒಕ್ಕೂಟದ ಅಧ್ಯಕ್ಷ ಆರ್.ಆರ್. ಓದುಗೌಡರ ತಿಳಿಸಿದ್ದಾರೆ.ಕೇಂದ್ರ ಸರ್ಕಾರವು ಸಿನಿಮಾ ಪ್ರದರ್ಶನದ ಮೇಲೆ ಶೇ 10.30 ರಷ್ಟು ಸೇವಾ ತೆರಿಗೆ ವಿಧಿಸಿದೆ. ಇದನ್ನು ವಿರೋಧಿಸಿ ಭಾರತೀಯ ಚಲನಚಿತ್ರ ಪ್ರದರ್ಶಕರ ಒಕ್ಕೂಟವು 23ರಂದು ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಚಿತ್ರಮಂದಿರಗಳಲ್ಲಿ ಸಹ ಬುಧವಾರ ಪ್ರದರ್ಶನ ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ಸೂಚಿಸಲಾಗುವುದು ಎಂದು ಅವರು `ಪ್ರಜಾವಾಣಿ~ಗೆ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry