ಶುಕ್ರವಾರ, ಮೇ 7, 2021
20 °C

ನಾಳೆ ಬಾನ್ ಕಿ-ಮೂನ್‌ಗೆ ಡಿ.ಲಿಟ್ ಪದವಿ ಗೌರವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿಶ್ವವಿದ್ಯಾಲಯವು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಾನ್ ಕಿ-ಮೂನ್ ಅವರಿಗೆ ಗೌರವ ಡಿ.ಲಿಟ್ ಪದವಿ ನೀಡಿ ಗೌರವಿಸಲಿದೆ.

ಇದೇ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ವಿಶೇಷ ಘಟಿಕೋತ್ಸವದಲ್ಲಿ ನಿವೃತ್ತ ಲೆಫ್ಟ್‌ನೆಂಟ್ ಜನರಲ್ ಹಾಗೂ ವಿವಿ ಕುಲಪತಿ ಎಂ.ಎ. ಜಕಿ ಅವರು ಮೂನ್ ಅವರಿಗೆ ಡಿ.ಲಿಟ್ ಪದವಿ ನೀಡಿ ಗೌರವಿಸಲಿದ್ದಾರೆ.

ವೃತ್ತಿಯಿಂದ ರಾಜತಾಂತ್ರಿಕರಾಗಿರುವ ಮೂನ್, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ 2011ರಲ್ಲಿ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಅವರು 2016 ಡಿಸೆಂಬರ್‌ವರೆಗೆ ಕಾರ್ಯದರ್ಶಿ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.