ನಾಳೆ ಬೃಹತ್ ಸಮಾವೇಶ

7

ನಾಳೆ ಬೃಹತ್ ಸಮಾವೇಶ

Published:
Updated:

ಬೆಂಗಳೂರು: `ಬೆಂಗಳೂರು ಪೂರ್ವ ತಾಲ್ಲೂಕು ತಿಗಳರ (ವಹ್ನಿಕುಲ) ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೇ ಭಾನುವಾರ (ಡಿ.23) ಕೆ.ಆರ್.ಪುರದ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಬೃಹತ್ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ' ಎಂದು ಸಂಘದ ಅಧ್ಯಕ್ಷ ಎಂ.ವೇಣುಗೋಪಾಲ್ ತಿಳಿಸಿದರು.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ರಾಜ್ಯದಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಕೋಲಾರ, ತುಮಕೂರು, ಮಂಡ್ಯ ಮತ್ತಿತರ ಜಿಲ್ಲೆಗಳಲ್ಲಿ ತಿಗಳ ಸಮುದಾಯದ ಜನರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಸಹ ಸಮುದಾಯದವರಿಗೆ  ರಾಜಕೀಯವಾಗಿ, ಶೈಕ್ಷಣಿಕವಾಗಿ ಅನ್ಯಾಯವಾಗುತ್ತಿದೆ' ಎಂದರು.`ತಿಗಳ ಜನಾಂಗವನ್ನು ರಾಜಕೀಯವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸಂಘಟಿತರನ್ನಾಗಿ ಮಾಡಲು ಈ ಸಮಾವೇಶವನ್ನು ಆಯೋಜಿಸಲಾಗಿದೆ' ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry