ಭಾನುವಾರ, ಜೂನ್ 13, 2021
25 °C

ನಾಳೆ ರಾಹುಲ್ ದ್ರಾವಿಡ್ ನಿವೃತ್ತಿ ಘೋಷಣೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಳೆ ರಾಹುಲ್ ದ್ರಾವಿಡ್ ನಿವೃತ್ತಿ ಘೋಷಣೆ?

ನವದೆಹಲಿ, (ಪಿಟಿಐ): ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರ, ಬ್ಯಾಟಿಂಗ್ ಕಟ್ಟಾಳು ಎಂದು ಖ್ಯಾತರಾಗಿರುವ ರಾಹುಲ್ ದ್ರಾವಿಡ್ ಅವರು ಶುಕ್ರವಾರ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿಯನ್ನು ಘೋಷಣೆ ಮಾಡುವ ಸಾಧ್ಯತೆ ಇದೆ  ಎಂದು ಹೇಳಲಾಗುತ್ತಿದೆ. 



ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಹುಲ್ ದ್ರಾವಿಡ್ ಹಾಗೂ ಬಿಸಿಸಿಐ ಅಧ್ಯಕ್ಷ ಎನ್. ಶ್ರೀನಿವಾಸನ್ ಅವರೊಂದಿಗೆ ಶುಕ್ರವಾರ ಜಂಟಿ ಪತ್ರಿಕಾಗೋಷ್ಟಿಯನ್ನು ನಡೆಸಲಿದ್ದಾರೆ ಎಂದು ಬಿಸಿಸಿಐ   ತಿಳಿಸಿದೆ.

 ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶುಕ್ರವಾರ ಮಧ್ಯಾಹ್ನ 12.30ಕ್ಕೆ  ನಡೆಯಲಿರುವ ಜಂಟಿ ಪತ್ರಿಕಾಗೋಷ್ಟಿಯಲ್ಲಿ ರಾಹುಲ್ ದ್ರಾವಿಡ್  ಅವರು ತಮ್ಮ ನಿವೃತ್ತಿ ಘೋಷಿಸಲಿದ್ದಾರೆ ಎನ್ನಲಾಗಿದೆ.  

ಆದರೆ,  ಇದುವರೆಗೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. 

  

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.