ಸೋಮವಾರ, ಜನವರಿ 17, 2022
18 °C

ನಾಳೆ ವಿವಿಧ ಪ್ರಶಸ್ತಿ ಪ್ರದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಯ ಬಸವ ಪುರ­ಸ್ಕಾರ, ಟಿ.ಚೌಡಯ್ಯ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಒಟ್ಟು 12 ಪ್ರಶಸ್ತಿ­ಗಳನ್ನು ಇದೇ 23ರಂದು ಪ್ರದಾನ ಮಾಡ­ಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಹೇಳಿದರು.23ರಂದು ಸಂಜೆ 6ಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಬುಧವಾರ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಶಾಸಕ ಆರ್‌.ವಿ.­ದೇವರಾಜ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಪಂಪ ಪ್ರಶಸ್ತಿ ಪುರಸ್ಕೃತರಾದ ಕಯ್ಯಾರ ಕಿಞ್ಞಣ್ಣ ರೈ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಅವರು ಬೆಂಗಳೂರಿಗೆ ಬರಲು ಆಗುವುದಿಲ್ಲ. ಹೀಗಾಗಿ ಅವರ ಮನೆಯಲ್ಲೇ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.ಮಾತುಕತೆ: ತೊಗಲು ಬೊಂಬೆಯಾಟ­ವನ್ನು ಯಕ್ಷಗಾನ ಬಯಲಾಟ ಅಕಾ­ಡೆಮಿ ವ್ಯಾಪ್ತಿಗೆ ಸೇರಿಸುವ ವಿಚಾರ­ದಲ್ಲಿ ಅಧ್ಯಕ್ಷ, ಸದಸ್ಯರ ನಡುವೆ ನಡೆ­ದಿರುವ ವಾಗ್ವಾದ ವಿಚಾರ ಪತ್ರಿಕೆ ಮೂಲಕ ಗೊತ್ತಾಗಿದೆ. ಇಲಾಖೆಯ ನಿರ್ದೇಶ­ಕರು ಅಧ್ಯಕ್ಷರೊಂದಿಗೆ ಮಾತ­ನಾಡಿ ಈ ವಿಷಯವನ್ನು ಬಗೆ­ಹರಿಸ­ಲಿ­ದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.