ಸೋಮವಾರ, ಜನವರಿ 27, 2020
17 °C

ನಾವು ಒಮ್ಮತ ಬಯಸುತ್ತೇವೆ - ಪ್ರಧಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಕೋಮು ಹಿಂಸಾಚಾರ ಮಸೂದೆ ಕುರಿತಂತೆ ಅಪಸ್ವರಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಪ್ರಧಾನಿ ಮನಮೋಹನ್ ಸಿಂಗ್ ಅವರು ನಾವು ಶಾಸಕಾಂಗದ ಎಲ್ಲ ಮಹತ್ವದ ವಿಷಯಗಳಲ್ಲಿ ಒಮ್ಮತ ಮೂಡಿಸಲು ಪ್ರಯತ್ನಿಸುತ್ತೇವೆ ಎಂದು ಗುರುವಾರ ಹೇಳಿದರು.

ಕೊಮು ಹಿಂಸಾಚಾರ ಮಸೂದೆ ಕುರಿತು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು `ವ್ಯಾಪಕ ಪರಾಮರ್ಶೆ' ನಡೆಯಲಿ ಎಂದು ಪ್ರಧಾನಿಯವರಿಗೆ ಪತ್ರ ಬರೆದಿರುವ ಬೆನ್ನಲ್ಲೇ, ಸಿಂಗ್ ಅವರಿಂದ ಈ ಹೇಳಿಕೆ ಹೊರಬಿದ್ದಿದೆ.

ಗುರುವಾರದಿಂದ ಪ್ರಾರಂಭವಾದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಆಗಮಿಸಿದ ಸಿಂಗ್ ಅವರು ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆ ಮಸೂದೆಗೆ ಮೋದಿ ಅವರು ವಿರೋಧ ವ್ಯಕ್ತಪಡಿಸಿದ್ದಾರಲ್ಲ ಎಂಬ ಪ್ರಶ್ನೆಗೆ `ಶಾಸಕಾಂಗದ ಎಲ್ಲ ಮಹತ್ವದ ವಿಷಯಗಳಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಮ್ಮತ ಮೂಡಿಸುವುದು ನಮ್ಮ ಪ್ರಯತ್ನವಾಗಿದೆ' ಎಂದು ಉತ್ತರಿಸಿದರು.

ಪ್ರತಿಕ್ರಿಯಿಸಿ (+)