ಮೈಸೂರು: ರಾಜ್ಯದ ನಿಗಮ ಮಂಡಳಿಗಳಿಗೆ ಯಾವುದೇ ಕಾರಣಕ್ಕೂ ಶಾಸಕರನ್ನು ನೇಮಕ ಮಾಡಬಾರದು. ನಿಗಮ-ಮಂಡಳಿಗೆ ಶಾಸಕರನ್ನು ನೇಮಿಸದೇ ಇರುವ ಪಕ್ಷದ ವಿಚಾರ ಸ್ವಾಗತಾರ್ಹ ಎಂದು ಸಂಸದ ಎಚ್. ವಿಶ್ವನಾಥ್ ಹೇಳಿದರು.

`ನಿಗಮ-ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರನ್ನು ನೇಮಕ ಮಾಡಬೇಕು. ಅದರಲ್ಲೂ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದರಿಂದ ಅಭಿವೃದ್ಧಿ ಕೆಲಸಗಳು ವೇಗ ಪಡೆಯುತ್ತವೆ. 1989ರಲ್ಲಿ ವೀರೇಂದ್ರ ಪಾಟೀಲ ಮುಖ್ಯಮಂತ್ರಿಯಾಗಿದ್ದಾಗ, ಅಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಹಾಗೆಯೇ ಮಾಡಬೇಕು' ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಲಹೆ ನೀಡಿದರು.

`ಅನುಭವಿ ಮಂತ್ರಿಗಳನ್ನು ಬಳಸಿಕೊಂಡು ಜನರ ಆಶಯಗಳಿಗೆ ತಕ್ಕಂತೆ ಕೆಲಸ ನಿರ್ವಹಿಸುವ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳ ಬೇಕು. ರಾಜ್ಯದಲ್ಲಿನ ಭ್ರಷ್ಟಾಚಾರ ಸಹಿಸದ ಮತದಾರರು ಈ ಬಾರಿ ಕಾಂಗ್ರೆಸ್ಗೆ ಬಹುಮತ ನೀಡಿದ್ದಾರೆ. ಹೀಗಾಗಿ, ಎಲ್ಲ ಸಚಿವರು, ಶಾಸಕರು ಇದನ್ನು ಅರ್ಥಮಾಡಿಕೊಂಡು ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಬೇಕು. ಅಭಿವೃದ್ಧಿ ಕುರಿತಂತೆ ವಿಸ್ತೃತ ಚರ್ಚೆ ನಡೆಸಬೇಕು' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.