ನಿಗಮ- ಮಂಡಳಿಗೆ ಶೀಘ್ರ ಹೊಸಬರ ನೇಮಕ

7

ನಿಗಮ- ಮಂಡಳಿಗೆ ಶೀಘ್ರ ಹೊಸಬರ ನೇಮಕ

Published:
Updated:

ಬೆಂಗಳೂರು: ಮೂರು ವರ್ಷ ಅವಧಿ ಪೂರ್ಣಗೊಂಡಿರುವ ಎಲ್ಲ ನಿಗಮ - ಮಂಡಳಿಗಳ ಅಧ್ಯಕ್ಷರನ್ನು ಬದಲಾಯಿಸಿ ಹೊಸಬರನ್ನು ನೇಮಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಸೋಮವಾರ ಅಥವಾ ಬುಧವಾರ ಅಧಿಕೃತ ಆದೇಶ ಹೊರ ಬೀಳುವ ಸಾಧ್ಯತೆ ಇದೆ.ಅವಧಿ ಪೂರ್ಣಗೊಂಡಿರುವ ನಿಗಮ, ಮಂಡಳಿಗಳ ಅಧ್ಯಕ್ಷರ ಬದಲಾವಣೆ ಹಾಗೂ ಖಾಲಿ ಇರುವ ಎರಡು ಸಚಿವ ಸ್ಥಾನಗಳ ಭರ್ತಿಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡಲು ಶನಿವಾರ ನಡೆದ ರಾಜ್ಯ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ನಿಗಮ, ಮಂಡಳಿಗಳ ಅಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದ ಪಟ್ಟಿಯನ್ನು ಸಭೆಯಲ್ಲೇ ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.ಪ್ರಮುಖರ ಸಮಿತಿ ಸಭೆಯಲ್ಲಿ ಸಿದ್ಧಪಡಿಸಿರುವ ಪಟ್ಟಿಯನ್ನು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರಿಗೆ ನೀಡಲಾಗಿದೆ.  ಕ್ರಿಸ್‌ಮಸ್ ಕಾರಣ ಮಂಗಳವಾರ ಸರ್ಕಾರಿ ರಜಾ ದಿನ. ಸೋಮವಾರ ಅಥವಾ ಬುಧವಾರ ನೇಮಕ ಆದೇಶಗಳು ಹೊರಬೀಳುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.ಮೋದಿ ಪ್ರಮಾಣವಚನಕ್ಕೆ ಹಾಜರು:

ನರೇಂದ್ರ ಮೋದಿ ಅವರು ನಾಲ್ಕನೇ ಬಾರಿ ಗುಜರಾತ್‌ನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜಗದೀಶ ಶೆಟ್ಟರ್, ಉಪಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ, ಆರ್.ಅಶೋಕ ಅವರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry