ಭಾನುವಾರ, ಮೇ 22, 2022
21 °C

ನಿಗೂಢ ರೋಗ 73 ಮಕ್ಕಳ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಟ್ನಾ (ಐಎಎನ್‌ಎಸ್): ಮಿದುಳಿನ ಉರಿಯೂತ ಹೋಲುವ ನಿಗೂಢ ರೋಗದಿಂದಾಗಿ ಬಿಹಾರದ ಮೂರು ಜಿಲ್ಲೆಗಳಲ್ಲಿ 15 ದಿನಗಳಿಂದೀಚೆಗೆ 73 ಮಕ್ಕಳು ಸಾವಿಗೀಡಾಗಿದ್ದಾರೆ.ಈ ಹಿನ್ನೆಲೆಯಲ್ಲಿ ಸರ್ಕಾರದ ಆರೋಗ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ತುರ್ತು ಸಭೆ ನಡೆಸಿದರು.ಮುಜಾಫರ್‌ಪುರ ಜಿಲ್ಲೆಯಲ್ಲಿ 30 ಮಕ್ಕಳು, ಗಯಾದಲ್ಲಿ 9 ಮಕ್ಕಳು ಹಾಗೂ ಪಟ್ನಾದಲ್ಲಿ 34 ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸೋಂಕಿನಿಂದ ಬಳಲುತ್ತಿರುವ ಇನ್ನೂ ಹಲವು ಮಕ್ಕಳು ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ರೋಗ ಯಾವುದು ಹಾಗೂ ರೋಗದ ನಿಖರ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ಇನ್ನೂ ಸಾಧ್ಯವಾಗಿಲ್ಲ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.