ನಿತ್ಯಾನಂದ ಪುರುಷತ್ವ ಪರೀಕ್ಷೆಗೆ ಹೈಕೋರ್ಟ್ ಆದೇಶದವರೆಗೆ ತಡೆ

ಶನಿವಾರ, ಮೇ 25, 2019
22 °C

ನಿತ್ಯಾನಂದ ಪುರುಷತ್ವ ಪರೀಕ್ಷೆಗೆ ಹೈಕೋರ್ಟ್ ಆದೇಶದವರೆಗೆ ತಡೆ

Published:
Updated:

ಬೆಂಗಳೂರು: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿಯನ್ನು ಪುರುಷತ್ವ ಪರೀಕ್ಷೆ, ಧ್ವನಿ ಪರೀಕ್ಷೆ ಸೇರಿದಂತೆ ಇತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲು ರಾಮನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿರುವ ಅನುಮತಿಗೆ ಹೈಕೋರ್ಟ್‌ನ ಮುಂದಿನ ಆದೇಶದವರೆಗೆ ತಡೆ ನೀಡಲಾಗಿದೆ.ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶದ ರದ್ದತಿಗೆ ಕೋರಿ ಸ್ವಾಮೀಜಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಜಗನ್ನಾಥನ್ ಬುಧವಾರ ಈ ಆದೇಶ ಹೊರಡಿಸಿದರು.

 

ಸ್ವಾಮೀಜಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ತಮಗೆ ಕಾಲಾವಕಾಶ ಬೇಕಾಗಿದೆ ಎಂದು ಸರ್ಕಾರದ ಪರ ವಕೀಲರು ಕೋರಿಕೊಂಡ ಕಾರಣದಿಂದ ಇದೇ 22ರವರೆಗೆ ಸಮಯ ನೀಡಿದ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಅಂದಿಗೆ ಮುಂದೂಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry