ನಿತ್ಯಾನಂದ ಸೇರಿ 18 ಮಂದಿ ವಿರುದ್ಧ ದೂರು

7

ನಿತ್ಯಾನಂದ ಸೇರಿ 18 ಮಂದಿ ವಿರುದ್ಧ ದೂರು

Published:
Updated:

ಬೆಂಗಳೂರು: `ನನ್ನ ವೈಯಕ್ತಿಕ ಜೀವನದ ಬಹಿರಂಗ ಚರ್ಚೆ ಮಾಡುವ ಮೂಲಕ ನನ್ನ ಗೌರವಕ್ಕೆ ಧಕ್ಕೆ ತಂದಿದ್ದಾರೆ~ ಎಂದು ಆರೋಪಿಸಿ ಆರತಿರಾವ್ ಬಿಡದಿಯ ನಿತ್ಯಾನಂದ ಸ್ವಾಮೀಜಿ ಹಾಗೂ ಖಾಸಗಿ ಸುದ್ದಿ ವಾಹಿನಿಯೊಂದರ ಸಿಬ್ಬಂದಿ ಸೇರಿದಂತೆ 18 ಮಂದಿ ವಿರುದ್ಧ ನಗರದ ಹೆಣ್ಣೂರು ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ.`ನಿತ್ಯಾನಂದ ಸ್ವಾಮೀಜಿ ನನ್ನ ಆರೋಗ್ಯಕ್ಕೆ ಸಂಬಂಧಿಸಿದ ಸುಳ್ಳು ದಾಖಲೆಗಳನ್ನು ಮುಂದಿಟ್ಟುಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ. ಇದರಿಂದ ನನ್ನ ಗೌರವಕ್ಕೆ ಧಕ್ಕೆಯಾಗಿದೆ~ ಎಂದು ಆರತಿ ರಾವ್ ದೂರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಹೆಣ್ಣೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry