ಶನಿವಾರ, ಏಪ್ರಿಲ್ 17, 2021
31 °C

ನಿಧನ ವಾರ್ತೆ:ಎಸ್.ಉದಯಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಿಧನ ವಾರ್ತೆ:ಎಸ್.ಉದಯಕುಮಾರ್

ಬೆಂಗಳೂರು: ಪತ್ರಿಕಾ ಛಾಯಾಗ್ರಾಹಕ ಎಸ್. ಉದಯಕುಮಾರ್ (35) ಅವರು ಭಾನುವಾರ ನಿಧನರಾದರು.

ಕೆಲವು ದಿನಗಳ ಹಿಂದೆ ಅವರು ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯಿಂದಾದ ಗಾಯದ ಕಾರಣದಿಂದ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.ಇವರು ಪತ್ರಿಕೆಗಳಲ್ಲಿ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಮೃತರಿಗೆ ಪತ್ನಿ ಹಾಗೂ ನಾಲ್ಕು ತಿಂಗಳ ಹೆಣ್ಣು ಮಗು ಇದೆ.ಬಿ.ಆರ್.ಗುರುಪ್ರಸಾದ್

ಬೆಂಗಳೂರು: ವಾರ್ತಾ ಇಲಾಖೆಯ ನಿರ್ದೇಶಕರ ವಾಹನ ಚಾಲಕರಾಗಿದ್ದ ಬಿ.ಆರ್. ಗುರುಪ್ರಸಾದ್ (48) ಭಾನುವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.ಮೃತರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ.

 

ಹನ್ನೆರಡು ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು, ಬೆಳಿಗ್ಗೆ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದರು. ಮೃತರ ಇಚ್ಛೆಯಂತೆ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಗಿದೆ ಎಂದು ಕುಟುಂಬ ಸದಸ್ಯರು ತಿಳಿಸಿದರು. ಚಾಮರಾಜಪೇಟೆಯಲ್ಲಿರುವ ಸ್ಮಶಾನದಲ್ಲಿ ಸಂಜೆ ಮೃತರ ಅಂತ್ಯಕ್ರಿಯೆ ನಡೆಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.