ನಿಯಂತ್ರಣ ಕಳೆದುಕೊಂಡ ಕಾರು: ಸರಣಿ ಅಪಘಾತ

7

ನಿಯಂತ್ರಣ ಕಳೆದುಕೊಂಡ ಕಾರು: ಸರಣಿ ಅಪಘಾತ

Published:
Updated:

ಕನಕಪುರ: ಟಾಟಾ ಇಂಡಿಕಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮತ್ತು ಮಾರುತಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಸಬಾ ಹೋಬಳಿ ಕುರಿಗೌಡನ ದೊಡ್ಡಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.ಬೆಂಗಳೂರು ಕಡೆಯಿಂದ ಬರುತ್ತಿದ್ದ ಟಾಟಾ ಇಂಡಿಕಾ ಕಾರಿನ ಚಾಲಕ ಮುಂದೆ ಹೋಗುತ್ತಿದ್ದ ವಾಹನವನ್ನು ಹಿಂದಿಕ್ಕಲು ಪ್ರಯತ್ನಿಸಿದ. ಆಗ ಆತ ಕನಕಪುರದ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಸಂದರ್ಭದಲ್ಲಿ ಕಾರಿನ ಚಕ್ರ ಕಿತ್ತುಕೊಂಡು ಹೋಗಿದ್ದರಿಂದ ಕಾರಿನ ನಿಯಂತ್ರಣ ತಪ್ಪಿ ಮತ್ತೆ ಕನಕಪುರದ ಕಡೆಯಿಂದ ಬರುತ್ತಿದ್ದ ಮಾರುತಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಮಾರುತಿ ಓಮ್ನಿಗೆ ಇಂಡಿಕಾ ಕಾರು ಡಿಕ್ಕಿಹೊಡೆದ ಪರಿಣಾಮ ಓಮ್ನಿ ಪಲ್ಟಿ ಹೊಡೆದು ರಸ್ತೆಯ ಬಲಭಾಗಕ್ಕೆ ಬಂದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಬೈಕ್ ಮತ್ತು ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry