ನಿಯಮಿತ ಧ್ಯಾನ, ವ್ಯಾಯಾಮಕ್ಕೆ ಸಲಹೆ

7

ನಿಯಮಿತ ಧ್ಯಾನ, ವ್ಯಾಯಾಮಕ್ಕೆ ಸಲಹೆ

Published:
Updated:

ಭರಮಸಾಗರ: ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ನಿತ್ಯ ನಿಯಮಿತವಾಗಿ ಧ್ಯಾನ, ವ್ಯಾಯಾಮ ಮಾಡುವ ಮೂಲಕ ದೇಹದ ಆರೋಗ್ಯ ಕಾಪಾಡಿಕೊಳ್ಳುವಂತೆಚಿತ್ರದುರ್ಗದ ಎಸ್‌ಜೆಎಂ ದಂತ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯ ನರಸಿಂಹಮೂರ್ತಿ ಸಲಹೆ ನೀಡಿದರು.ಸಮೀಪದ ಕೋಡಿರಂಗವ್ವನಹಳ್ಳಿಯಲ್ಲಿ ಎಂ. ಬಸವಯ್ಯ ವಸತಿ ಮಹಾವಿದ್ಯಾಲಯ ಎನ್‌ಎಸ್‌ಎಸ್ ಶಿಬಿರದ ಅಂಗವಾಗಿ ಗುರುವಾರ ಆಯೋಜಿಸಿದ್ದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಪಠ್ಯದ ಜತೆಗೆ, ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಮಾನಸಿಕ ಮತ್ತು ಶಾರೀರಿಕ ಕ್ಷಮತೆ ಹೆಚ್ಚಿಸಿಕೊಳ್ಳಬೇಕು ಎಂದರು.

ಎಸ್‌ಜೆಎಂ ಮಹಾವಿದ್ಯಾಲಯದ ವೈದರ ತಂಡ ಶಿಬಿರದಲ್ಲಿಭಾಗವಹಿಸಿದ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry