ಸೋಮವಾರ, ಜೂನ್ 14, 2021
27 °C

ನಿರಂತರ ಜ್ಯೋತಿ ಬೇಡ: 2ನೇ ದಿನಕ್ಕೆಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ: ಪ್ರಯೋಜನವಾಗದ ನಿರಂತರ ಜ್ಯೋತಿ ಯೋಜನೆ ಕಾಮಗಾರಿ ಸ್ಥಗಿತ ಗೊಳಿಸಬೇಕೆಂದು ಆಗ್ರಹಿಸಿ ಘಂಟಂವಾರಿಪಲ್ಲಿ ಗ್ರಾಮ ಪಂಚಾಯಿತಿ ಗ್ರಾಮಸ್ಥರು ನಡೆಸುತ್ತಿರುವ ಪ್ರತಿಭಟನೆ ಮಂಗಳವಾರ ಎರಡನೇ ದಿನಕ್ಕೆ ಕಾಲಿಟ್ಟಿತು.ಪಟ್ಟಣದ ಬೆಸ್ಕಾಂ ಇಲಾಖೆ ಎದುರು ಜಮಾ ಯಿಸಿದ್ದ ನೂರಾರು ರೈತರು ನಿರಂತರ ಜ್ಯೋತಿ ಕಾಮಗಾರಿಗೆ ಹಸಿರು ನಿಶಾನೆ ತೋರಿಸಿದ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ಈ ಕೂಡಲೇ ನಿರಂತರ ಜ್ಯೋತಿ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿದರು.ಗ್ರಾಮಸ್ಥ ಚಂದ್ರಶೇಖರರೆಡ್ಡಿ ಮಾತನಾಡಿ, ಹಳ್ಳಿಯಲ್ಲಿ ದುಡಿಯುವ ರೈತರಿಗೆ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ರೈತನಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ದಿನಕ್ಕೆ ಕನಿಷ್ಠ ಆರು ಗಂಟೆಯಾದರೂ ವಿದ್ಯುತ್ ನೀಡಬೇಕು ಎಂದು ಆಗ್ರಹಿಸಿದರು.ಗ್ರಾಮಸ್ಥರಾದ ಜಯರಾಮರೆಡ್ಡಿ, ಚಂದ್ರಶೇಖ ರರೆಡ್ಡಿ, ವೆಂಕಟರೆಡ್ಡಿ, ಬಾಲಕೃಷ್ಣ, ವೆಂಕಟೇಶ್, ಮಲ್ಲಿಕಾರ್ಜುನರೆಡ್ಡಿ, ಮದನ ಮೋಹನರೆಡ್ಡಿ, ಶ್ರೀನಿವಾಸರೆಡ್ಡಿ, ಗಂಗರಾಜು, ಸೋಮಶೇಖರ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.