ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶವು ತನ್ನ ನಿರೀಕ್ಷೆಯನ್ನು ಹುಸಿ ಮಾಡಿದೆ ಎಂದು ಬಿಜೆಪಿ ಹೇಳಿದೆ.

`ಗೋವಾ, ಪಂಜಾಬ್ ಹಾಗೂ ಉತ್ತರಾಖಂಡದಲ್ಲಿ ಪಕ್ಷವು ಸರ್ಕಾರ ರಚಿಸುವ ಸ್ಥಿತಿಯಲ್ಲಿದೆ. ಈ ಫಲಿತಾಂಶವು ಬಿಜೆಪಿಗೆ ಬಲ ಕೊಡುವುದಾಗಿ ನಂಬಿದ್ದೇನೆ~ ಎಂದು ಅಧ್ಯಕ್ಷ ನಿತಿನ್ ಗಡ್ಕರಿ ಸುದ್ದಿಗಾರರಿಗೆ ತಿಳಿಸಿದರು.

`ಅಲ್ಪಸಂಖ್ಯಾತರ ವಿರೋಧಿ ಎಂದು ಬಿಜೆಪಿಯನ್ನು ದೂಷಿಸಲಾಗುತ್ತದೆ. ಆದರೆ ಈ ಬಾರಿ ಗೋವಾದಲ್ಲಿ ಕ್ಯಾಥೊಲಿಕ್ ಕ್ರೈಸ್ತರು ಕೂಡ ನಮಗೆ ಮತ ಹಾಕಿದ್ದಾರೆ~ ಎಂದು ಅವರು ಗೋವಾದಲ್ಲಿ ಪಕ್ಷದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅಕಾಲಿ ದಳ- ಬಿಜೆಪಿ ಮೈತ್ರಿ ಗೆದ್ದಿದ್ದಕ್ಕೆ ಗಡ್ಕರಿ ಅವರು ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಉತ್ತರ ಪ್ರದೇಶದಲ್ಲಿ ಪ್ರಾದೇಶಿಕ ಪಕ್ಷಗಳಾದ ಎಸ್ಪಿ ಹಾಗೂ ಬಿಎಸ್ಪಿ ನಡುವೆ ಮತಗಳು ಹಂಚಿಹೋಗಿದ್ದರಿಂದ ಬಿಜೆಪಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗಲಿಲ್ಲ ಎಂದ ಅವರು, `ಉತ್ತರ ಪ್ರದೇಶದ ಫಲಿತಾಂಶವು ಕಾಂಗ್ರೆಸ್ಗೆ ಭಾರಿ ಆಘಾತ ನೀಡಿದೆ~ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.