ಸೋಮವಾರ, ಏಪ್ರಿಲ್ 19, 2021
31 °C

ನಿರುದ್ಯೋಗ ಭತ್ಯೆಗೆ ಆಗ್ರಹ: ಗ್ರಾಪಂಗೆ ಕೃಷಿ ಕಾರ್ಮಿಕರ ಮುತ್ತಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಹಾಬಾದ: ಉದ್ಯೋಗ ಖಾತರಿ ಯೋಜನೆಯಲ್ಲಿ ಕೃಷಿ ಕೂಲಿ ಕಾರ್ಮಿಕರಿಗೆ ಕೆಲಸ ಅಥವಾ ನಿರುದ್ಯೋಗ ಭತ್ಯೆ ನೀಡದ ಸರ್ಕಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ನೂರಾರು ಕೃಷಿ ಕೂಲಿ ಕಾರ್ಮಿಕರು ಮಂಗಳವಾರ ಭಂಕೂರ ಗ್ರಾಮ ಪಂಚಾಯಿತಿ ಕಾರ್ಯಾಲಯದ ಎದುರು ಧರಣಿ ನಡೆಸಿದರು. ಸ್ವಲ್ಪ ಸಮಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರ್ವರ್ ಬೇಗಂ, ಉಪಾಧ್ಯಕ್ಷೆ ಕಾವೇರಿ ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿಗೆ ದಿಗ್ಭಂಧನೆ ಹಾಕಿದ ಘಟನೆಯೂ ನಡೆಯಿತು.ಪ್ರತಿಭಟನೆಯ ನೇತೃತ್ವವಹಿಸಿದ್ದ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ತಾಲ್ಲೂಕು ಸಂಘದ ಅಧ್ಯಕ್ಷ ಅಶೋಕ ಮ್ಯಾಗೇರಿ ಮಾತನಾಡಿ, `ಕೆಲವು ತಿಂಗಳ ಹಿಂದೆ ಭಂಕೂರ ಗ್ರಾಮದಲ್ಲಿ ನಡೆಸಿದ್ದ ಧರಣಿ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಈ ಸಂಬಂಧ ಕ್ರಮ ಜರುಗಿಸುವ ಭರವಸೆ ನೀಡಿ ಹೋಗಿದ್ದರು. ಆದರೆ ಎರಡು ತಿಂಗಳು ಕಳೆದರೂ ಭರವಸೆ ಈಡೇರಿಲ್ಲ. ಇನ್ನು ಕಾರ್ಮಿಕರು ಬೀದಿಗಿಳಿದು ಹೋರಾಡುವುದು ಅನಿವಾರ್ಯವಾಗುವುದಾಗಿ~ ಎಚ್ಚರಿಸಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಥಳಕ್ಕೆ ಆಗಮಿಸಿ, ಜಿಲ್ಲಾ ಪಂಚಾಯಿತಿ ಅಧಿಕಾರಿಗಳೊಂದಿಗೆ ಮಾತನಾಡಿ ಈ ಸಂಬಂಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ ನಂತರ ಧರಣಿಯನ್ನು ಹಿಂದಕ್ಕೆ ಪಡೆಯಲಾಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.