ಮುಂಬರುವ ಹದಿನಾರನೇ ಲೋಕಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳ ಮೂವರು ಮಹಿಳೆಯರು ಸಾಕಷ್ಟು ಮಟ್ಟಿಗೆ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ ಎಂದು ಅನಿಸುತ್ತಿದೆ. ಆ ಮೂವರು ಮಹಿಳೆಯರೆಂದರೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಂಥ ಮಾಯಾವತಿ.

ಹಾಗೆ ನೋಡಿದರೆ, ಮಾಯಾವತಿ ನೇತೃತ್ವದ ಬಿ.ಎಸ್.ಪಿ., ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್, ಮತ್ತು ಜಯಲಲಿತಾ ನೇತೃತ್ವದ ಎ.ಐ.ಎ.ಡಿ.ಎಂ.ಕೆ. ಈ ಮೂರೂ ಪ್ರಾದೇಶಿಕ ಪಕ್ಷಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಷ್ಟೆಷ್ಟು ಸ್ಥಾನಗಳನ್ನು ಪಡೆಯಬಹುದೆಂಬುದು ಕೂಡ ಅಷ್ಟೇ ನಿರ್ಣಾಯಕ ಅಂಶವೇ ಆಗಲಿದೆ.

ಕಾಂಗ್ರೆಸ್ ಮತ್ತು ಬಿ.ಜೆ.ಪಿ.ಯಂಥ ಪಕ್ಷಗಳು ರಾಷ್ಟ್ರೀಯ ಪಕ್ಷಗಳೇ ಆಗಿದ್ದರೂ, ಲೋಕಸಭಾ ಚುನಾವಣೆಯಲ್ಲಿ ಹಲವು ರಾಜ್ಯಗಳ ಪ್ರಾದೇಶಿಕ ಪಕ್ಷಗಳನ್ನು ಸೋಲಿಸುವುದು ಅಷ್ಟು ಸುಲಭವಾಗೇನೂ ಕಾಣುವುದಿಲ್ಲ.

ಹಾಗಾಗಿ, ಕೇಂದ್ರದಲ್ಲಿ ಮತ್ತೆ ಕೆಲವು ಮಿತ್ರ ಪಕ್ಷಗಳ ಸಮ್ಮಿಶ್ರ ಸರ್ಕಾರವೇ ಪುನಃ ಅನಿವಾರ್ಯ ಎಂಬಂತೆ ತೋರುತ್ತದೆ. ಆದರೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿ.ಜೆ.ಪಿ. ಮಹಿಳಾ ಅಭ್ಯರ್ಥಿಗಳಿಗೆ ಸಾಕಷ್ಟು ಅವಕಾಶಗಳನ್ನು ನೀಡುವುದು ಅನಿವಾರ್ಯವೂ ಆಗಬಹುದು ಮತ್ತು ಅದನ್ನು ತಡೆಗಟ್ಟುವುದು ಅಷ್ಟು ಸುಲಭವೂ ಎಂದೆನಿಸುವಂತಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.