ನಿರ್ದೇಶಕ ಎಸ್.ಮಹೇಂದರ್ ಕಾಂಗ್ರೆಸ್‌ಗೆ

ಗುರುವಾರ , ಮೇ 23, 2019
32 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ನಿರ್ದೇಶಕ ಎಸ್.ಮಹೇಂದರ್ ಕಾಂಗ್ರೆಸ್‌ಗೆ

Published:
Updated:

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಲನಚಿತ್ರ ನಿರ್ದೇಶಕ ಎಸ್.ಮಹೇಂದರ್ ಗುರುವಾರ ಕಾಂಗ್ರೆಸ್ ಪಕ್ಷ ಸೇರಿದರು.ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಮಹೇಂದರ್ ಅವರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡರು. ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರೂ ಆಗಿರುವ ಶಾಸಕ ಎಚ್.ಎಸ್.ಮಹದೇವಪ್ರಸಾದ್, ಹನೂರು ಶಾಸಕ ನರೇಂದ್ರ ಉಪಸ್ಥಿತರಿದ್ದರು.ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಪರಮೇಶ್ವರ್, `ಕೋಮುವಾದಿ ರಾಜಕೀಯ ಪಕ್ಷವಾದ ಬಿಜೆಪಿ ಶೋಷಿತ ಸಮುದಾಯದ ಮುಖಂಡರನ್ನು ಬಳಸಿಕೊಂಡು, ಕಡೆಗಣಿಸುತ್ತಿದೆ. ಇದಕ್ಕೆ ಬೇಸತ್ತಿರುವ ಹಲವರು ಈಗ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.ಮಹೇಂದರ್ ಸೇರ್ಪಡೆ ಆರಂಭವಷ್ಟೆ. ಭ್ರಷ್ಟಾಚಾರದಿಂದ ಬೇಸತ್ತಿರುವ ಬಿಜೆಪಿಯ ಹಲವು ಶಾಸಕರು ಕೂಡ ನಮ್ಮ ಜೊತೆ ಸಂಪರ್ಕದಲ್ಲಿ ಇದ್ದಾರೆ. ಬೇಷರತ್ತಾಗಿ ಪಕ್ಷಕ್ಕೆ ಬರುವವರನ್ನು ನಾವು ಮುಕ್ತವಾಗಿ ಸ್ವಾಗತಿಸುತ್ತೇವೆ~ ಎಂದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry