ಸೋಮವಾರ, ಮೇ 10, 2021
26 °C

ನಿರ್ಲಕ್ಷಿಸಿದ್ದೇ ತಪ್ಪು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಕಳೆದ ನಾಲ್ಕು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ಸಂಭವಿಸಿದ ಸ್ಫೋಟದ ನಂತರ ಸರ್ಕಾರ ಕ್ರಮ ಕೈಗೊಂಡಿದ್ದರೆ ಈಗ ಮತ್ತೊಂದು ಭೀಕರ ಸ್ಫೋಟ ಸಂಭವಿಸುತ್ತಿರಲಿಲ್ಲ ಎಂದು ಬಿಜೆಪಿ ಆಪಾದಿಸಿದೆ.

ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿರುವ ರಾಮಮನೋಹರ ಲೋಹಿಯಾ ಆಸ್ಪತ್ರೆಗೆ ಭೇಟಿ ನೀಡಿದ್ದ ಲೋಕಸಭೆ ಪ್ರತಿಪಕ್ಷ ನಾಯಕಿ ಸುಷ್ಮಾ ಸ್ವರಾಜ್ ಹೀಗೆ ಹೇಳಿದರು.ಮೇ 25ರಂದು ಸ್ಫೋಟ ಸಂಭವಿಸಿದ ನಂತರ ಹೈಕೋರ್ಟ್ ಕಟ್ಟಡದ ಸುತ್ತಮುತ್ತ ಸಿ.ಸಿ ಟಿ.ವಿಗಳನ್ನು ಅಳವಡಿಸಲು ನಿರ್ಧರಿಸಲಾಗಿತ್ತು. ಆದರೆ ಯಾವ ಕ್ರಮವನ್ನೂ ಸರ್ಕಾರ ಕೈಗೊಳ್ಳಲಿಲ್ಲ ಎಂದು ಸುಷ್ಮಾ ದೂರಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.