ಗುರುವಾರ , ಏಪ್ರಿಲ್ 22, 2021
22 °C

ನಿರ್ಲಕ್ಷ್ಯ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾನ್ವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಧರಣಿ ನಡೆಸುತ್ತಿದ್ದ ಜೈ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬುಧವಾರ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ಕಚೇರಿಗೆ ಮುಳ್ಳು ಬೇಲಿ ಹಚ್ಚಿ ಪ್ರತಿಭಟಿಸಲು ಯತ್ನಿಸಿದ ಘಟನೆ ನಡೆಯಿತು.ಕಳೆದ ಮೂರು ದಿನಗಳಿಂದ ಧರಣಿ ನಡೆಸುತ್ತಿದ್ದರೂ ತಹಸೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ವಿವಿದ ಇಲಖೆಗಳ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬೇಡಿಕೆಗಳ ಕುರಿತು  ಆಲಿಸಲು ಬಂದಿಲ್ಲ. ಹೋರಾಟಗಾರರ ಬೇಡಿಕೆಗಳಿಗೆ  ಸ್ಪಂದಿಸದ ಅಧಿಕಾರಿಗಳ ಬೇಜವಾಬ್ದಾರಿ ಧೋರಣೆ ಖಂಡನೀಯ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

ಧರಣಿ ನಿರತರು ಮುಳ್ಳು ಬೇಲಿ ಹಿಡಿದು ಕಚೇರಿ ಕಡೆಗೆ  ನುಗ್ಗಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ತಡೆಯೊಡ್ಡಿದರು. ಕೆಲಹೊತ್ತಿನ ನಂತರ ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಧರಣಿ ನಿರತರಿಂದ ಮನವಿ ಪತ್ರ ಸ್ವೀಕರಿಸಿದರು. ನಂತರ ಧರಣಿಯನ್ನು ಅಂತ್ಯಗೊಳಿಸಲಾಯಿತು.ಜೈಕರವೇ ಸಂಘಟನೆಯ ರಾಜ್ಯ ಸಂಚಾಲಕ ಪ್ರಭುರಾಜ ಕೊಡ್ಲಿ, ತಾಲ್ಲೂಕು ಅಧ್ಯಕ್ಷ ಹುಸೇನಪ್ಪ ಭಂಡಾರಿ, ಪದಾಧಿಕಾರಿಗಳಾದ ಹುಸೇನಪ್ಪ ಆಲ್ದಾಳ, ವೆಂಕಟೇಶ, ಶರಣಪ್ಪ, ರಮೇಶ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.