ನಿವೃತ್ತಿಯಾಗಲಿರುವ ಶಿಕ್ಷಕರಿಗೆ ಸನ್ಮಾನ

7

ನಿವೃತ್ತಿಯಾಗಲಿರುವ ಶಿಕ್ಷಕರಿಗೆ ಸನ್ಮಾನ

Published:
Updated:

ಚನ್ನಪಟ್ಟಣ: ತಾಲ್ಲೂಕು ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘವು ಇಲ್ಲಿನ ಸರ್ಕಾರಿ ಬಾಲಕರ ಪ.ಪೂ. ಕಾಲೇಜಿನಲ್ಲಿ ನಿವೃತ್ತಿ ಹೊಂದುತ್ತಿರುವ ಶಿಕ್ಷಕರನ್ನು ಸನ್ಮಾನಿಸುವ ಕಾರ್ಯಕ್ರಮ ಏರ್ಪಡಿಸಿತ್ತು.ಜೆ.ಬ್ಯಾಡರಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಜಯರಾಮು ಹಾಗೂ ಸಾರ್ವಜನಿಕ ಪ.ಪೂ.ಕಾಲೇಜು ಸಹಶಿಕ್ಷಕ ರಾಮದಾಸು ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ಪ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣಗೌಡ, ಮುಖ್ಯ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ದಶರಥ ಸಿಂಗ್, ನಿಂಗೇಗೌಡ, ಕಾರ್ಯದರ್ಶಿ ರಾಮಲಿಂಗಯ್ಯ, ಜಿಲ್ಲಾ ಮುಖ್ಯಶಿಕ್ಷಕರ ಸಂಘದ ಸಹಕಾರ್ಯದರ್ಶಿ ರಾಮಕೃಷ್ಣ ಮುಂತಾದವರು ಹಾಜರಿದ್ದರು. ಚನ್ನಪಟ್ಟಣದ ಮಂಗಳವಾರಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಏರ್ಪಡಿಸಿದ್ದ ಮೀನಾ ಕಾರ್ಯಕ್ರಮಕ್ಕೆ  ಕ್ಷೇತ್ರಶಿಕ್ಷಣಾಧಿಕಾರಿ ಶಿವಪ್ಪ ಚಾಲನೆ ನೀಡಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry