ನಿವೃತ್ತಿ ವೇತನ ಹೆಚ್ಚಳಕ್ಕೆ ಒತ್ತಾಯ

ಮಂಗಳವಾರ, ಜೂಲೈ 23, 2019
20 °C

ನಿವೃತ್ತಿ ವೇತನ ಹೆಚ್ಚಳಕ್ಕೆ ಒತ್ತಾಯ

Published:
Updated:

ಮೈಸೂರು: ನಿವೃತ್ತಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನಿವೃತ್ತಿ ವೇತನ ಹೆಚ್ಚಳ ಮಾಡಬೇಕು ಎಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಒಕ್ಕೂಟ ಒತ್ತಾಯಿಸಿದೆ.`ಈಗ ನಿವೃತ್ತಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಜೀವನದಲ್ಲಿ ಸಾಕಷ್ಟು ನೊಂದಿದ್ದಾರೆ. ಸರ್ಕಾರದ ಆದೇಶದಂತೆ ಪ್ರತಿ ತಿಂಗಳು 5ನೇ ತಾರೀಕಿನೊಳಗೆ ಗೌರವ ಧನ ಪಾವತಿಸಬೇಕು.ಅಡುಗೆ ಮಾಡಲು ಗ್ಯಾಸ್ ಸ್ಟೌ, ಗ್ಯಾಸ್ ಮತ್ತು ಕುಕ್ಕರ್‌ಗಳನ್ನು ಒದಗಿಸಿರುವುದನ್ನು ಒಕ್ಕೂಟ ಸ್ವಾಗತಿಸುತ್ತದೆ~ ಎಂದು ಅಂಗನವಾಡಿ ಜಿಲ್ಲಾ ಕಾರ್ಯದರ್ಶಿ ಡಿ.ಜಗನ್ನಾಥ್ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry