ಸೋಮವಾರ, ಏಪ್ರಿಲ್ 19, 2021
23 °C

ನಿವೃತ್ತ ಐಎಎಸ್ ಅಧಿಕಾರಿಗಳು ಕಾಂಗ್ರೆಸ್‌ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿವೃತ್ತ ಐಎಎಸ್ ಅಧಿಕಾರಿಗಳಾದ ಅಶೋಕ್‌ಕುಮಾರ್ ಸಿ.ಮನೋಳಿ ಮತ್ತು ಎಸ್.ಪುಟ್ಟಸ್ವಾಮಿ ಸೋಮವಾರ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ರಾಜಕೀಯಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.ಪುಟ್ಟಸ್ವಾಮಿ ಅವರು ಕೆಲವು ದಿನಗಳ ಹಿಂದೆಯೇ ಕಾಂಗ್ರೆಸ್ ಪಕ್ಷ ಸೇರಬೇಕಿತ್ತು.ಆದರೆ, ಅರಕಲಗೂಡು ಶಾಸಕ ಎ.ಮಂಜು ಅವರ ವಿರೋಧದ ಕಾರಣದಿಂದ ಈ ಪ್ರಕ್ರಿಯೆಯನ್ನು ಕೆಲಕಾಲ ಮುಂದೂಡಲಾಗಿತ್ತು. ಸೋಮವಾರ ಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ  ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಅವರು ಕಾಂಗ್ರೆಸ್ ಸೇರುವರು.1982ನೇ ವರ್ಷದ ಐಎಎಸ್ ಅಧಿಕಾರಿಯಾಗಿದ್ದ ಮನೋಳಿ ಅವರು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಅವರು ಇತ್ತೀಚೆಗಷ್ಟೇ ಸೇವೆಯಿಂದ ನಿವೃತ್ತರಾದರು. ಈಗ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಆರಂಭಿಸಲು ಸಜ್ಜಾಗಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.