ಬುಧವಾರ, ಮೇ 18, 2022
21 °C

ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೇಲೂರು: ತಾಲ್ಲೂಕಿನ ತಗರೆ ಸಮೀಪದ ಮುಗುಳುವಳ್ಳಿ ಗ್ರಾಮದ ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಸಿದ್ದೇಗೌಡ ಪರಿಶಿಷ್ಟ ಜಾತಿಗೆ ಸೇರಿದ ಜನರ ಮೇಲೆ ದೌರ್ಜನ್ಯ ಮತ್ತು ಅವಾಚ್ಯ ಶಬ್ಧಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕುತ್ತಿದ್ದು, ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದಲಿತ ಸಂಘಟನೆ  ಮುಖಂಡರು ಆಗ್ರಹಿಸಿದರು.ಶಾಸಕ ವೈ.ಎನ್.ರುದ್ರೇಶ್‌ಗೌಡ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ-ವರ್ಗದ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿದ ದಲಿತ ಸಂಘಟನೆಗಳ ಮುಖಂಡರಾದ ಎಂ.ಜಿ.ವೆಂಕಟೇಶ್, ಲಕ್ಷ್ಮಣ್, ಚಿಕ್ಕಬ್ಯಾಡಿಗೆರೆ ಮಂಜುನಾಥ್ ಮತ್ತಿತರರು 2009ರಲ್ಲಿ ಸಿದ್ದೇಗೌಡ ದಲಿತರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಕ್ಕಾಗಿ ಪರಿಶಿಷ್ಟ ಜಾತಿ ದೌರ್ಜನ್ಯ ತಡೆ ಕಾಯಿದೆ ಅನ್ವಯ ಮೊಕದ್ದಮ್ಮೆ ದಾಖಲಾಗಿದೆ. ಪೊಲೀಸರಿಗೆ ದೂರು ನೀಡಿದ ವ್ಯಕ್ತಿ ಅಡ್ಡಗಟ್ಟಿ  ದೂರು ವಾಪಾಸ್ ಪಡೆಯುವಂತೆ ಒತ್ತಾಯ ಮಾಡುವುದಲ್ಲದೆ, ಕೊಲೆ ಬೆದರಿಕೆ ಹಾಕಿ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದಾರೆ. ಅರೇಹಳ್ಳಿ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದರೂ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.ಇದಕ್ಕೆ ಶಾಸಕ ವೈ.ಎನ್.ರುದ್ರೇಶ್‌ಗೌಡ ವಿನಾ ಕಾರಣ ದೌರ್ಜನ್ಯ ನಡೆಸು ತ್ತಿರುವ ಸಿದ್ದೇಗೌಡರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸರ್ಕಾರದಿಂದ 24 ಲಕ್ಷ ರೂಪಾಯಿ ಹಣ ಬಿಡುಗಡೆಯಾಗಿದ್ದರೂ ಜಿಲ್ಲಾಧಿ ಕಾರಿ ಹಣ ಬಿಡುಗಡೆ ಮಾಡದೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದರಿಂ ದಾಗಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಆರಂಭಗೊಂಡಿಲ್ಲ ಎಂದು ಶಾಸಕ ವೈ.ಎನ್.ರುದ್ರೇಶ್‌ಗೌಡ ಅಸಮಾಧಾನ ವ್ಯಕ್ತಪಡಿಸಿದರು.ತಾಲ್ಲೂಕಿನ ದೇವಾಲಪುರ ಗ್ರಾಮದ ದಲಿತ ಕಾಲೋನಿಯ ಅಭಿವೃದ್ಧಿಗೆ 8 ಲಕ್ಷ ರೂ. ಬಿಡುಗಡೆಯಾಗಿದ್ದು, ಈ ಪೈಕಿ 4 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗುವುದು, ಉಳಿಕೆ ಹಣದಲ್ಲಿ ಮೂಲಭೂತ ಸೌಕರ್ಯ ಕೈಗೊಳ್ಳ ಲಾಗುವುದು. ದಲಿತ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ತಾವು ಶಾಸಕರಾದ ಅವಧಿಯಲ್ಲಿ ಬಿಡುಗಡೆಯಾದಷ್ಟು ಹಣ ಇನ್ಯಾವ ಅವಧಿಯಲ್ಲೂ ಬಿಡುಗಡೆಯಾಗಿಲ್ಲ ಎಂದು ಹೇಳಿದರು.ತಹಶೀಲ್ದಾರ್ ಎನ್.ಎಸ್.ಚಿದಾನಂದ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ಕೃಷ್ಣಮೂರ್ತಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.