ಗುರುವಾರ , ನವೆಂಬರ್ 21, 2019
26 °C

ನಿವೃತ್ತ ಪೊಲೀಸ್ ಸಿಬ್ಬಂದಿಗೆ `ಆರೋಗ್ಯ ಭಾಗ್ಯ' ಕಲ್ಪಿಸಲು ಒತ್ತಾಯ

Published:
Updated:

ಹಾಸನ: `ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಾಜ್ಯ ಸರ್ಕಾರ `ಆರೋಗ್ಯ ಭಾಗ್ಯ' ಯೋಜನೆ ಕಲ್ಪಿಸಬೇಕು' ಎಂದು ನಿವೃತ್ತ ಆರಕ್ಷಕ ಉಪ ನಿರೀಕ್ಷಕ ದಾಸೇಗೌಡ ಒತ್ತಾಯಿಸಿದರು.ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಮಂಗಳವಾರ ಪೊಲೀಸ್ ಇಲಾಖೆಯವರು  ಆಯೋಜಿಸಿದ್ದ `ಪೊಲೀಸ್ ಧ್ವಜ ದಿನಾಚರಣೆ' ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, `ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಶಿಸ್ತು, ಸಂಯಮ ಹಾಗೂ ಸಮಯ ಪ್ರಜ್ಞೆ ಮೈಗೂಡಿಸಿಕೊಳ್ಳಬೇಕು. ದಿನದ 24 ಗಂಟೆಯೂ ಜನರ ಸೇವೆ ಮಾಡಲು ಸಿದ್ಧರಾಗಬೇಕು' ಎಂದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್‌ಸಿಂಗ್, `ಪೊಲೀಸ್ ಇಲಾಖೆ ಸಿಬ್ಬಂದಿ ಪ್ರಾಣದ ಹಂಗು ತೊರೆದು ಕೆಲಸ ಮಾಡಬೇಕು. ನಿವೃತ್ತ ಪೊಲೀಸರ ಸೇವೆಯನ್ನು ಸ್ಮರಿಸುವ ಸಲುವಾಗಿ ಪೊಲೀಸ್ ಧ್ವಜ ದಿನವನ್ನು ಆಚರಿಸಲಾಗುತ್ತಿದೆ. 2012-13ನೇ ಸಾಲಿನಲ್ಲಿ ಪೊಲೀಸ್ ಧ್ವಜಗಳನ್ನು ಮಾರಾಟ ಮಾಡಿ 27 ಸಾವಿರ ರೂಪಾಯಿ ಹಣ ಸಂಗ್ರಹಿಸಲಾಗಿದೆ. ಈ ಹಣವನ್ನು ನಿವೃತ್ತ ಪೊಲೀಸರ ಪುನರ್ವವಸತಿಗೆ ಬಳಸಿಕೊಳ್ಳಲಾಗುವುದು' ಎಂದರು.ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅಭಿನವ ಖರೆ, ಡಿ.ವೈ.ಎಸ್ಪಿ. ಯಡಾ ಮಾರ್ಟಿನ್ ಇದ್ದರು.

ಪ್ರತಿಕ್ರಿಯಿಸಿ (+)