ಶುಕ್ರವಾರ, ಮೇ 27, 2022
31 °C

ನಿವೃತ್ತ ಸರ್ಕಾರಿ ನೌಕರರಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಪಟ್ಟಣ: ನಿವೃತ್ತರಿಗೆ ಪಿಂಚಣಿ ನೀಡಿದರಷ್ಟೇ ಸಾಲದು, ಅವರ ಆರೋಗ್ಯ ರಕ್ಷಣೆಗೆ ವಿಶೇಷ ಯೋಜನೆ ರೂಪಿಸಬೇಕು ಎಂದು ಭಾರತ ವಿಕಾಸ ಪರಿಷತ್‌ಅಧ್ಯಕ್ಷ ಬಿ.ಸಿ.ಕೃಷ್ಣಪ್ಪ ಅಭಿಪ್ರಾಯಪಟ್ಟರು.

ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ನಿವೃತ್ತ ಸರ್ಕಾರಿ ನೌಕರರ ಸಂಘ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶೆ ಎನ್.ಶೀಲಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಿರಿಯರಿಗೆ ಹಿರಿಯರ ಮಾರ್ಗದರ್ಶನ ಅತ್ಯವಶ್ಯಕವಾಗಬೇಕಾಗಿದೆ. ಪ್ರತಿಯೊಬ್ಬರು ಹಿರಿಯರನ್ನು ಗೌರವದಿಂದ ಕಾಣಬೇಕು. ಹಿರಿಯರ ಸಲಹೆ ಸಹಕಾರಗಳ ಮೇರೆಗೆ ಮುನ್ನಡೆಯಬೇಕೆಂದು ಅವರು ಸಲಹೆ ನೀಡಿದರು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಸಿಂ.ಲಿಂ. ನಾಗರಾಜು ಹಿರಿಯ ನಿವೃತ್ತ ನೌಕರರನ್ನು ಸನ್ಮಾನಿಸಿದರು. ಭ್ರಷ್ಟಾಚಾರ ರಹಿತವಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ವ್ಯಕ್ತಿಗಳನ್ನು ಹಿರಿಯ ನಾಗರಿಕ ದಿನಾಚರಣೆ ಸಂದರ್ಭದಲ್ಲಿ ಸನ್ಮಾನಿಸುತ್ತಿರುವುದು ಸಂತೋಷದ ವಿಷಯ ಎಂದರು.

ಸಂಘದ ಕಾರ್ಯದರ್ಶಿ ರಾಮಲಿಂಗಯ್ಯ ಮಾತನಾಡಿ, ಸಂಘಕ್ಕೆ   ನಿವೇಶನವನ್ನು ನೀಡಲು ಸಚಿವ ಸಿ.ಪಿ. ಯೋಗೀಶ್ವರ್ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಸಚಿವರು ಈ ಬಗ್ಗೆ ಸಕಾರಾತ್ಮಕವಾಗಿದ್ದಾರೆ. ತಹಶೀಲ್ದಾರ್‌ರವರಿಗೆ ಜಾಗ ಗುರುತಿಸಲು ತಿಳಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನಿವೃತ್ತ ನೌಕರರಾದ ಕೋಟೆ ಸುಶೀಲಮ್ಮ ಸದಾಶಿವಮೂರ್ತಿ, ಶ್ರೀಕಂಠಯ್ಯ, ಜಯಮ್ಮ, ನರಸಿಂಹಜಟ್ಟಿ ಪಟ್ಟಣದ ಮಹಮದ್ ಆಸಿಮ್, ಕೆಲಗೆರೆ ಟಿ. ಮಂಚಯ್ಯ, ಕೂರಣಗೆರೆ ಎಂ. ಲಿಂಗಯ್ಯ ಬೇವೂರು ಮಂಡ್ಯ ಎಂ. ತಿಮ್ಮೇಗೌಡ, ಚಿಕ್ಕಮಳೂರು ಸಿ.ಎಸ್. ಚೌಡೇಗೌಡ ಅವರನ್ನು ಸಂದರ್ಭದಲ್ಲಿ ಸನ್ಮಾನಿಸಲಾಯಿತು. ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ಲಿಂಗೇಗೌಡ  ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.