ಗುರುವಾರ , ಮೇ 6, 2021
26 °C

ನಿವೇಶನರಹಿತರಿಗೆ ನೂತನ ಬಡಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜಗಳೂರು: ಪಟ್ಟಣದಲ್ಲಿರುವ  ನಿವೇಶನರಹಿತರಿಗೆ ಮನೆ ನಿರ್ಮಾಣಕ್ಕಾಗಿ ಪಟ್ಟಣಕ್ಕೆ ಹೊಂದಿ ಕೊಂಡಂತೆ 15 ಎಕರೆ ಪ್ರದೇಶದಲ್ಲಿ ನೂತನ ಬಡಾವಣೆ ನಿರ್ಮಿಸಲಾಗುವುದು ಎಂದು ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಎಸ್.ವಿ. ರಾಮಚಂದ್ರ ಹೇಳಿದರು.ಪಟ್ಟಣದಲ್ಲಿ ನಿವೇಶನರಹಿತರು ಹೆಚ್ಚಿನ ಪ್ರಮಾಣದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಹೊರವಲಯದಲ್ಲಿ ಸರ್ಕಾರಿ  ಹಾಗೂ ಖಾಸಗಿ ಜಮೀನು  ಸ್ವಾಧೀನ ಪಡಿಸಿಕೊಂಡು ಸುಸಜ್ಜಿತವಾಗಿ ವಸತಿ ಬಡಾವಣೆ ನಿರ್ಮಿಸಲಾಗುವುದು.ಪ್ರಸ್ತುತ ವಾಜಪೇಯಿ ವಸತಿ ಯೋಜನೆಯಡಿ 2 ಸಾವಿರ ಮನೆಗಳು ಮಂಜೂರಾಗಿದ್ದು, ಬಡ ಫಲಾನುಭವಿಗಳಿಗೆ ಮನೆ ಹಾಗೂ ನಿವೇಶನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಪಟ್ಟಣದ ಹಲವು ಬಡಾವಣೆಗಳಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸಿಲ್ಲ. ಅಕ್ರಮ ಡೋರ್ ನಂಬರ್ ನೀಡಲಾಗಿದೆ ಎಂಬ ಆರೋಪಗಳ ಬಗ್ಗೆ ಒಂದೆರಡು ದಿನಗಳಲ್ಲಿ ಖುದ್ದು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ರಸ್ತೆ ವಿಸ್ತರಣೆ ಕುರಿತು ಶೀಘ್ರ ಸಭೆ  ನಡೆಸಲಾಗುವುದು.   ಯಾವುದೇ ಆತುರದ  ಕ್ರಮ  ಕೈಗೊಳ್ಳುವುದಿಲ್ಲ.  ನವೆಂಬರ್‌ನಲ್ಲಿ  ಪಟ್ಟಣದಲ್ಲಿ  ರಾಜ್ಯಮಟ್ಟದ  `ಪೈಕಾ~ ಮಹಿಳಾ ಕ್ರೀಡಾಕೂಟ ನಡೆಯಲಿದೆ. 2 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಹಾಗೂ ಅಧಿಕಾರಿ, ಸಿಬ್ಬಂದಿ ಆಗಮಿಸಲಿದ್ದು, ಸುಸಜ್ಜಿತ ವಾಸ್ತವ್ಯ ಹಾಗೂ ಪಟ್ಟಣದ ಸೌಂದರ್ಯಕ್ಕೆ ಒತ್ತು ನೀಡಲಾಗುವುದು  ಎಂದು ವಿವರಿಸಿದರು.ವಿಧಾನಸಭಾ  ಕ್ಷೇತ್ರಕ್ಕೆ ಹೆಚ್ಚುವರಿ 3 ಸಾವಿರ ಮನೆಗಳು ಮಂಜೂರಾಗಿದ್ದು, ಇದರಿಂದಾಗಿ ಪಟ್ಟಣ ಸೇರಿದಂತೆ ಕ್ಷೇತ್ರವ್ಯಾಪ್ತಿಯಲ್ಲಿ ಕೇವಲ ಒಂದು ವರ್ಷದಲ್ಲಿ 11 ಸಾವಿರ ಮನೆಗಳು ಮಂಜೂರಾಗಿದ್ದು, ರಾಜ್ಯದಲ್ಲಿ  ಅತಿಹೆಚ್ಚು ಮನೆಗಳು ಮಂಜೂರಾಗಿರುವ ಎರಡನೇ ಕ್ಷೇತ್ರವಾಗಿದೆ. ಗುಡಿಸಲುಮುಕ್ತ ಕ್ಷೇತ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ಬರಪೀಡಿತ ತಾಲ್ಲೂಕಾಗಿ ಸರ್ಕಾರ ಶೀಘ್ರವೇ ಘೋಷಿಸುವ ಸಾಧ್ಯತೆ ಇದೆ ಎಂದು ರಾಮಚಂದ್ರ ಹೇಳಿದರು.ಪಟ್ಟಣದ ಹೊರವಲಯದಲ್ಲಿ ್ಙ 3.5 ಕೋಟಿ ವೆಚ್ಚದಲ್ಲಿ 12.5 ಎಕರೆ ಪ್ರದೇಶದಲ್ಲಿ ಕಿತ್ತೂರು ರಾಣಿ ಚನ್ನಮ್ಮ ವಸತಿಶಾಲಾ ಕಟ್ಟಡ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡಲಾಗುವುದು. ತಾಲ್ಲೂಕಿನ 108 ಹಳ್ಳಿಗಳಿಗೆ ರಾಜೀವ್‌ಗಾಂಧಿ ಸಬ್‌ಮಿಷನ್ ಯೋಜನೆಯಡಿ ಶುದ್ಧ ಕುಡಿಯುವ ನೀರು ಪೂರೈಕೆ ಕಾಮಗಾರಿಗೆ ಚಾಲನೆ ದೊರೆತಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಬಿ.ಆರ್. ಅಂಜಿನಪ್ಪ, ಪ.ಪಂ. ಅಧ್ಯಕ್ಷ ಜೆ.ವಿ. ನಾಗರಾಜ್, ಜಿ.ಪಂ. ಸದಸ್ಯ ಎಚ್. ನಾಗರಾಜ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಎಸ್.ಕೆ. ಮಂಜುನಾಥ್, ಎಚ್.ಸಿ. ಮಹೇಶ್, ಶಿವಕುಮಾರಯ್ಯ, ರಾಜು ನೆರೆಬೊಮ್ಮನಹಳ್ಳಿ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.