ಶನಿವಾರ, ಮೇ 28, 2022
27 °C

ನಿಸಾರ್, ಚಂಪಾ ಸೇರಿ 10 ಮಂದಿಗೆ ನುಡಿಸಿರಿ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಸಾಹಿತಿಗಳಾದ ಡಾ.ಕೆ.ಎಸ್. ನಿಸಾರ್ ಅಹಮ್ಮದ್, ಡಾ.ಚಂದ್ರಶೇಖರ ಪಾಟೀಲ, ವಿಮರ್ಶಕ ಡಾ.ಸಿ.ಎನ್.ರಾಮಚಂದ್ರನ್ ಸೇರಿ 10 ಮಂದಿಗೆ ಆಳ್ವಾಸ್ ನುಡಿಸಿರಿ- 2011 ಪ್ರಶಸ್ತಿ ಪ್ರಕಟಿಸಿದೆ.ಪ್ರಸಾರ ಭಾರತಿಯ ಮಾಜಿ ಅಧ್ಯಕ್ಷ ಡಾ.ಎಂ.ವಿ.ಕಾಮತ್, ರಂಗಕರ್ಮಿ ಚಿದಂಬರರಾವ್ ಜಂಬೆ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್, ಚಿತ್ರನಟ ಶ್ರೀನಾಥ್, ಹಿನ್ನೆಲೆ ಗಾಯಕಿ ಬಿ.ಕೆ.ಸುಮಿತ್ರಾ, ಜ್ಞಾನ ಪ್ರತಿಷ್ಠಾನದ ಮುಖ್ಯಸ್ಥ ಪಾಂಡವಪುರ ಅಂಕೇಗೌಡ ಹಾಗೂ ಮಾಚಾರ್ ಗೋಪಾಲ್ ನಾಯ್ಕ ಅವರು ಪ್ರಶಸ್ತಿ ಪಡೆದ ಇತರ ಗಣ್ಯರು.ಪ್ರಶಸ್ತಿಯು ಸ್ಮರಣಿಕೆ, 10 ಸಾವಿರ ನಗದು, ಪ್ರಶಸ್ತಿ ಪತ್ರಹೊಂದಿದೆ.  ಮೂಡುಬಿದಿರೆಯಲ್ಲಿ ನ. 11ರಿಂದ 13ರವರೆಗೆ ನಡೆಯಲಿರುವ ಆಳ್ವಾಸ್ ನುಡಿಸಿರಿಯಲ್ಲಿ ಪ್ರದಾನ ಮಾಡಲಾಗುವುದು.  ಎಂದು ಹೇಳಿದರು.`ಸಮ್ಮೇಳನದಲ್ಲಿ ಭಾಗವಹಿಸುವ ಸಾಹಿತ್ಯಾಸಕ್ತರಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಸಮ್ಮೇಳನದ ಸಮಾರೋಪದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಅವರನ್ನು ಸನ್ಮಾನಿಸಲಾಗುವುದು. ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಸಮ್ಮೇಳನ ಉದ್ಘಾಟಿಸಲಿದ್ದು, ಹಿರಿಯ ವಿಮರ್ಶಕ ಡಾ.ಎಂ.ಎಂ.ಕಲಬುರ್ಗಿ ಅವರು ಅಧ್ಯಕ್ಷತೆ ವಹಿಸುವರು~ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.