ನಿಸಾರ್, ವರ್ಮಾಗೆ ಗೌರವ ಡಾಕ್ಟರೇಟ್

7

ನಿಸಾರ್, ವರ್ಮಾಗೆ ಗೌರವ ಡಾಕ್ಟರೇಟ್

Published:
Updated:

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವು ನಿತ್ಯೋತ್ಸವ ಖ್ಯಾತಿಯ ಕವಿ ಪ್ರೊ. ಕೆ.ಎಸ್. ನಿಸಾರ್ ಅಹಮದ್ ಮತ್ತು ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ ಅವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ಪದವಿ ನೀಡಲಿದೆ. ಫೆಬ್ರುವರಿ 15ರಂದು ನಡೆಯಲಿರುವ ವಿ.ವಿ.ಯ 46ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿಗಳನ್ನು ಪ್ರದಾನ ಮಾಡಲಾಗುವುದು.ಈಚೆಗೆ ನಡೆದ ಸಿಂಡಿಕೇಟ್ ಸಭೆಯಲ್ಲಿ ಹಿರಿಯ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಅವರ ಹೆಸರನ್ನೂ ಶಿಫಾರಸು ಾಡಿ ವಿ.ವಿ. ಕುಲಾಧಿಪತಿಗಳೂ ಆದ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರ ಅಂತಿಮ ಒಪ್ಪಿಗೆಗಾಗಿ ಕಳುಹಿಸಲಾಗಿತ್ತು. ಆದರೆ ರಾಜ್ಯಪಾಲರು ಚಿದಾನಂದಮೂರ್ತಿ ಅವರ ಹೆಸರನ್ನು ಕೈಬಿಟ್ಟು, ಇಬ್ಬರ ಹೆಸರನ್ನು ಮಾತ್ರ ಅಂತಿಮಗೊಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry