ಗುರುವಾರ , ಜೂನ್ 17, 2021
22 °C

ನಿಸ್ವಾರ್ಥ ಜನಪ್ರತಿನಿಧಿಗೆ ಬೆಂಬಲ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು: ಸೇವಾ ಮನೋಭಾವದಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಅತ್ಯಲ್ಪ ಜನಪ್ರತಿನಿಧಿಗಳಿಗೆ ಜನತೆ ಬೆಂಬಲವಾಗಿ ನಿಲ್ಲದಿದ್ದರೆ ರಾಜಕೀಯ ನೈತಿಕತೆಯ ಆತ್ಮಸ್ಥೈರ್ಯ ಕುಗ್ಗುತ್ತದೆ ಎಂದು ಪಟ್ಟನಾಯಕನಹಳ್ಳಿಯ ನಂಜಾವದೂತ ಸ್ವಾಮೀಜಿ ತಿಳಿಸಿದರು.ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಹತ್ಯಾಳ ನರಸಿಂಹಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 1.22 ಕೋಟಿ ರೂಪಾಯಿ ವೆಚ್ಚದಲ್ಲಿ ಚೆಕ್‌ಡ್ಯಾಂ ನಿರ್ಮಿಸಲು ಭಾನುವಾರ ನಡೆದ ಭೂಮಿಪೂಜೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿರಳವಾಗಿರುವ ಸ್ವಚ್ಛ ಮತ್ತು ಪ್ರಾಮಾಣಿಕ ಜನಪ್ರತಿನಿಧಿಗಳ ಆತ್ಮಸ್ಥೈರ್ಯ ಕುಗ್ಗುವ ಪರಿಸ್ಥಿತಿ ಬಂದರೆ ಸಮಾಜಕ್ಕೆ ಭವಿಷ್ಯವಿಲ್ಲ ಎಂದರು.ಕೆ.ಬಿ.ಕ್ರಾಸ್ ರಂಭಾಪುರಿ ಶಾಖಾ ಮಠದ ಸಿದ್ದರಾಮದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ನೆಲಸಂಸ್ಕೃತಿ ಅರ್ಥ ಮಾಡಿಕೊಂಡ ಜನಪ್ರತಿನಿಧಿಗಳು ಮಾತ್ರ ರೈತರ ಶ್ರೇಯಸ್ಸಿಗೆ ದುಡಿಯುತ್ತಾರೆ ಎಂದರು.ಶಾಸಕ ಬಿ.ಸಿ.ನಾಗೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಪಿಎಂಸಿ ನಿರ್ದೇಶಕರಾದ ಸಿದ್ದಲಿಂಗಮೂರ್ತಿ, ಮಹಲಿಂಗಯ್ಯ, ಹಾಲು ಒಕ್ಕೂಟದ ನಿರ್ದೇಶಕ ಪ್ರತಾಪ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಂಕರಪ್ಪ ಮತ್ತಿತರರು ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.