ಚಾಮರಾಜನಗರ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಡಿ ಕಾಂಗ್ರೆಸ್ ಜನಪ್ರತಿನಿಧಿಗಳು ಜಿಲ್ಲೆಯಲ್ಲಿ ಕಾಮಗಾರಿಗಳಿಗೆ ತರಾತುರಿಯಲ್ಲಿ ಚಾಲನೆ ನೀಡುತ್ತಿದ್ದ ಬೆನ್ನಲ್ಲೇ ಜಿಲ್ಲೆಯ ಯಳಂದೂರು ಪಟ್ಟಣದಲ್ಲಿ ಬುಧವಾರ ನೀತಿಸಂಹಿತೆ ಉಲ್ಲಂಘಿಸಿದ ಆರೋಪವೂ ಕೇಳಿಬಂದಿದೆ.

ಲೋಕಸಭಾ ಚುನಾವಣೆಯನ್ನು ಗುರಿಯಾಗಿಟ್ಟು ಕೊಂಡೇ ಈಚೆಗೆ ಗುಂಡ್ಲುಪೇಟೆ ಪಟ್ಟಣದಲ್ಲಿ ಸುಮಾರು ₨ 800 ಕೋಟಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಇತ್ತೀಚೆಗೆ ಕೇಂದ್ರ ಸಚಿವ ಸಂಪುಟ ದೇಶದ ವಿವಿಧ ಜಿಲ್ಲೆಗಳಿಗೆ ಕೇಂದ್ರೀಯ ವಿದ್ಯಾಲಯ ಗಳನ್ನು ಮಂಜೂರು ಮಾಡಿತ್ತು. ಚಾಮರಾಜನಗರ ಜಿಲ್ಲೆಗೂ ಕೇಂದ್ರೀಯ ವಿದ್ಯಾಲಯ ಮಂಜೂರಾಗಿದೆ.

ವಿದ್ಯಾಲಯ ಆರಂಭಿಸಲು ರೇಷ್ಮೆ ಇಲಾಖೆಗೆ ಸೇರಿದ ಕಟ್ಟಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಅದರ ಉದ್ಘಾಟನೆ ಬುಧವಾರ ನೆರವೇರಬೇಕಿತ್ತು. ಆದರೆ, ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ವೇಳೆಪಟ್ಟಿಯನ್ನು ಬಿಡುಗಡೆಗೊಳಿಸಿದ ಹಿನ್ನೆಲೆಯಲ್ಲಿ ಉದ್ಘಾಟನೆ ಮುಂದೂಡಲ್ಪಟ್ಟಿದೆ.

ಯಳಂದೂರು ಪಟ್ಟಣದಲ್ಲಿ ಪ್ರಾಚ್ಯವಸ್ತು, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ಬುಧವಾರ ಬೆಳಿಗ್ಗೆ 11ಗಂಟೆಗೆ ದಿವಾನ್ ಪೂರ್ಣಯ್ಯ ಸರ್ಕಾರಿ ವಸ್ತು ಸಂಗ್ರಹಾಲಯದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು. ಆ ವೇಳೆಗೆ ಚುನಾವಣಾ ನೀತಿಸಂಹಿತೆಯೂ ಜಾರಿಗೊಂಡಿತ್ತು. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್. ಮಹದೇವಪ್ರಸಾದ್ ಉದ್ಘಾಟನೆ ನೆರವೇರಿಸಿದರು.

ಆರ್. ಧ್ರುವನಾರಾಯಣ, ಶಾಸಕ ಎಸ್. ಜಯಣ್ಣ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋದಾ ಪ್ರಭುಸ್ವಾಮಿ ಸೇರಿದಂತೆ ಸ್ಥಳೀಯ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಆದರೆ, ತಾಲ್ಲೂಕು ಚುನಾವಣಾಧಿಕಾರಿ ಸ್ಥಳಕ್ಕೆ ಆಗಮಿಸಿ ಉದ್ಘಾಟನಾ ಕಾರ್ಯಕ್ರಮವನ್ನು ತಡೆಹಿಡಿಯುವ ಕೆಲಸ ಮಾಡಲಿಲ್ಲ.
ಸಚಿವ ಮಹದೇವಪ್ರಸಾದ್ ಪತ್ರಕರ್ತರೊಂದಿಗೆ ಮಾತನಾಡಿ, ‘ಚುನಾವಣಾ ಆಯೋಗವೂ ಎಷ್ಟು ಗಂಟೆಗೆ ಲೋಕಸಭೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ ಎಂಬುದು ತಮಗೆ ಗೊತ್ತಿಲ್ಲ. ಚುನಾವಣಾ ಅಧಿಕಾರಿಗಳು ಕೂಡ ನಮಗೆ ಮಾಹಿತಿ ನೀಡಿಲ್ಲ. ಕಾರ್ಯಕ್ರಮ ಪೂರ್ವ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ವಸ್ತು ಸಂಗ್ರಹಾಲಯದ ಉದ್ಘಾಟನೆ ನೆರವೇರಿಸಲಾಗಿದೆ’ ಎಂದು ಪ್ರತಿಕ್ರಿಯಿಸಿದರು.

ಅದೇ ವೇಳೆಗೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಆರ್. ಸಿದ್ದಪ್ಪ ಮಾತನಾಡಿ, ‘ನೀತಿಸಂಹಿತೆ ಬಗ್ಗೆ ತಿಳಿಸಲು ಸ್ಥಳಕ್ಕೆ ಬಂದಿದ್ದೆವು. ಆ ವೇಳೆಗೆ ಕಾರ್ಯಕ್ರಮ ಮುಗಿದುಹೋಗಿತ್ತು’ ಎಂದು ಉತ್ತರಿಸಿದರು.

ಬಳಿಕ ಅಧಿಕಾರಿಗಳು ಜನಪ್ರತಿನಿಧಿಗಳಿಗೆ ನೀಡಿದ್ದ ಸರ್ಕಾರಿ ವಾಹನಗಳನ್ನು ತಮ್ಮ ಸುಪರ್ದಿಗೆ ಪಡೆದರು. ಜನಪ್ರತಿನಿಧಿಗಳು ಸ್ವಂತ ವಾಹನಗಳಲ್ಲಿ ಮರಳುವಂತಾಯಿತು.

‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಎ.ಎಂ. ಕುಂಜಪ್ಪ, ‘ನೀತಿಸಂಹಿತೆ ಬಗ್ಗೆ ಕಾರ್ಯಕ್ರಮದ ಸಂಘಟಕರ ಗಮನಕ್ಕೆ ತಂದಿದ್ದೇನೆ. ಆ ವೇಳೆ ಟೇಪ್ ಕತ್ತರಿಸಲಾಗಿತ್ತು. ನಂತರ, ಕಾರ್ಯಕ್ರಮ ಮುಂದುವರಿಸಲು ಅವಕಾಶ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.