ನೀತಿ ಸಂಹಿತೆ ಉಲ್ಲಂಘನೆ: ರಾಮದಾಸ್‌ಗೆ ದಂಡ

ಬುಧವಾರ, ಜೂಲೈ 24, 2019
28 °C

ನೀತಿ ಸಂಹಿತೆ ಉಲ್ಲಂಘನೆ: ರಾಮದಾಸ್‌ಗೆ ದಂಡ

Published:
Updated:

ಮೈಸೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಕೋರ್ಟ್‌ಗೆ ಹಾಜರಾದ ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಅವರಿಗೆ ಜೆಎಂಎಫ್‌ಸಿ 3ನೇ ನ್ಯಾಯಾಲಯ 100 ರೂಪಾಯಿ ದಂಡ ವಿಧಿಸಿದೆ.2008ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ರಾಮದಾಸ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಹಲವಾರು ಬಾರಿ ಸಮನ್ಸ್ ಜಾರಿಗೊಳಿಸಿದ್ದರೂ ರಾಮದಾಸ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

 

ಹೀಗಾಗಿ ನ್ಯಾಯಾಧೀಶರಾದ ದಮಯಂತಿ ಜೂನ್ 30ರಂದು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದರೂ ರಾಮದಾಸ್ ಹಾಜರಾಗಿರಲಿಲ್ಲ. ಹೀಗಾಗಿ ನ್ಯಾಯಾಲಯವು ದಂಡ ವಿಧಿಸಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry