ಬುಧವಾರ, ಮೇ 12, 2021
18 °C

ನೀನಾ ನಾಯಕ್ ಖುದ್ದು ಹಾಜರಿಗೆ ಕೋರ್ಟ್ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾನೂನಿನ ಎದುರು ಸಂಘರ್ಷಕ್ಕೆ ಒಳಗಾದ ಮಕ್ಕಳ (ಬಾಲಾಪರಾಧಿಗಳ) ಸ್ಥಿತಿಗತಿಯನ್ನು ತಿಳಿಯ ಬಯಸಿರುವ ಹೈಕೋರ್ಟ್, ಈ ಸಂಬಂಧ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ನೀನಾ ನಾಯಕ್ ಅವರ ಖುದ್ದು ಹಾಜರಿಗೆ ಸೋಮವಾರ ನಿರ್ದೇಶಿಸಿದೆ.ಇಂತಹ ಮಕ್ಕಳು ಅನುಭವಿಸುತ್ತಿರುವ ಹಿಂಸೆಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿ ಬಂದಿರುವ ವರದಿಯ ಆಧಾರದ ಮೇಲೆ ಕೋರ್ಟ್ ಖುದ್ದಾಗಿ ದೂರು ದಾಖಲು ಮಾಡಿಕೊಂಡು ನಡೆಸುತ್ತಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇದಾಗಿದೆ.ಈ ವಿಷಯಕ್ಕೆ ಸಂಬಂಧಿಸಿದಂತೆ ಕೋರ್ಟ್‌ಗೆ ಸಹಾಯ ಮಾಡಲು ವಕೀಲೆ ಸುಮನಾ ಬಾಳಿಗ ಅವರನ್ನು ಮುಖ್ಯ ನ್ಯಾಯಮೂರ್ತಿಗಳು ನೇಮಕ ಮಾಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.