ಹಿರೀಸಾವೆ: ಹಿರೀಸಾವೆ ಹೋಬಳಿಗೆ ಶಾಶ್ವತ ನೀರಾವರಿ ಯೋಜನೆ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಭಾನುವಾರ ಪಟ್ಟಣದಿಂದ ಬೆಂಗಳೂರಿಗೆ (120 ಕಿ.ಮೀ.) ಪಾದಯಾತ್ರೆ ಆರಂಭಿಸಿದರು.

ಶ್ರೀಕಂಠಯ್ಯ ವೃತ್ತದಲ್ಲಿ ಬೆಳಿಗ್ಗೆ 10 ಗಂಟೆಗೆ ಮಹಿಳೆಯರು ಆರತಿ ಬೆಳಗುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಶ್ರವಣಬೆಳಗೊಳ ಮತ್ತು ಹಿರೀಸಾವೆ ಹೋಬಳಿಯ ವಿವಿಧ ಗ್ರಾಮಗಳ ರೈತರು ಕಾಲ್ನಡಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದಾರೆ. ಹಲವು ಗ್ರಾಮಗಳ ರೈತರು ಹಾಡುಗಳನ್ನು ಹೇಳಿದರು ಮತ್ತು ಜನಪದ ಶೈಲಿ, ರಂಗಶೈಲಿಯ ಕುಣಿತವನ್ನು ಜಾಥಾದಲ್ಲಿ ಪ್ರದರ್ಶನ ಮಾಡಿದರು. ಕೆಲವು ಜನಪ್ರತಿನಿಧಿಗಳು, ವರ್ತಕರು ಮತ್ತು ಸರ್ಕಾರಿ ನೌಕರರು ಸಹ ಹಾಸನ ಜಿಲ್ಲಾ ಗಡಿವರೆಗೆ ಜಾಥಾದಲ್ಲಿ ಭಾಗ ವಹಿಸಿದ್ದರು. ಹಿರೀಸಾವೆ ಪಟ್ಟಣದಲ್ಲಿನ ವ್ಯಾಪಾರಸ್ಥರು ವ್ಯವಹಾರವನ್ನು ಸ್ಥಗಿತಗೊಳಿಸಿ ಬೆಂಬಲ ನೀಡಿದರು.

ಪ್ರತಿ ನಿತ್ಯ 30 ಕಿ.ಮೀ. ಪಾದಯಾತ್ರೆ ಕೈಗೊಂಡಿದ್ದು, ಫೆ. 12ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಅವರನ್ನು ಭೇಟಿ ಮಾಡಿ, ನೀರಾವರಿ ಯೋಜನೆಗೆ ಮಂಜೂರಾತಿ ನೀಡುವಂತೆ ಮನವಿ ಸಲ್ಲಿಸುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಹೋಬಳಿ ಘಟಕದ ಅಧ್ಯಕ್ಷ ಮಹೇಶ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಡಿ.ಜಿ. ಅಂಬಿಕಾ ರಾಮಕೃಷ್ಣ, ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್.ಎಸ್. ವಿಜಯಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶ್ರೀಧರ್, ಬಾಕ್ಲ್ ಕಾಂಗ್ರೆಸ್ ಅಧ್ಯಕ್ಷ ಗೋಪಾಲಸ್ವಾಮಿ ಮಾತನಾಡಿದರು.

ಕಳೆದ 30 ವರ್ಷಗಳಿಂದ ಹೋಬಳಿಯ 60 ಗ್ರಾಮಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಹಲವು ಸಲ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ವಿವಿಧ ಸಂಘಟನೆಗಳು ಹಲವು ರೀತಿಯ ಹೋರಾಟ ನಡೆಸಿವೆ. ನೀರಾವರಿ ಯೋಜನೆ ಅನುಷ್ಠಾನವಾಗದ ಹಿನ್ನೆಲೆಯಲ್ಲಿ ಕರವೇ, ರಾಜ್ಯ ರೈತ ಸಂಘದ ಹೋಬಳಿ ಘಟಕಗಳು ಸರ್ಕಾರದ ಗಮನ ಸೆಳೆಯಲು ಕಾಲ್ನಡಿಗೆ ಜಾಥವನ್ನು ಹಮ್ಮಿಕೊಂಡಿವೆ.
ಮುಖ್ಯಮಂತ್ರಿಗೆ ಮನವಿ

‘ಹಲವು ವರ್ಷಗಳಿಂದ ಮಳೆಯಾಗದೆ ರೈತರು ಕಂಗಾಲಾಗಿದ್ದಾರೆ. ಜನ–ಜಾನುವಾರುಗಳಿಗೆ ಕುಡಿಯಲು ನೀರು ಸಿಗುತ್ತಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ಹೋಬಳಿಗೆ ನೀರಾವರಿ ಯೋಜನೆಗಳನ್ನು ಮಂಜೂರು ಮಾಡಲು ಮುಖ್ಯಮಂತ್ರಿಗಳನ್ನು ಒತ್ತಾಯಿ ಸಲಾಗುವುದು’ ಎಂದು ಮಾಜಿ ಶಾಸಕ ಸಿ.ಎಸ್. ಪುಟ್ಟೇಗೌಡ ಹೇಳಿದರು.

‘ಜನಿವಾರ ಕೆರೆಯಿಂದ ಹೊರಹೋಗುವ ಹೆಚ್ಚುವರಿ ನೀರನ್ನು ಶ್ರವಣಬೆಳಗೊಳ– ಹಿರೀಸಾವೆ ಮತ್ತು ಕೆ.ಆರ್. ಪೇಟೆ ತಾಲ್ಲೂಕಿನ ಸಂತೇಬಾಚಹಳ್ಳಿ ಹೋಬಳಿಗಳ ಕೆರೆಗಳಿಗೆ ಹರಿಸಲು ಕಾವೇರಿ ನೀರಾವರಿ ನಿಗಮವು ನೀಲನಕ್ಷೆ ತಯಾರಿಸಿದೆ. ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಎಲ್ಲರೂ ಪಕ್ಷ ಭೇದ ಮರೆತು ಕೆಲಸ ಮಾಡಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಡಿ.ಜಿ. ಅಂಬಿಕಾ ರಾಮಕೃಷ್ಣ , ಕಾಂಗ್ರೆಸ್ ಮುಖಂಡ ದೀಪು, ಕರ್ನಾಟಕ ರಕ್ಷಣಾ ವೇದಿಕೆಯ ಮಧು ಕರಡೆವು, ಮಹೇಶ್, ಯೋಗೇಶ್, ಕೃಷ್ಣೇಗೌಡ ಸೇರಿದಂತೆ ರೈತ ಮುಖಂಡರು ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.