ಬುಧವಾರ, ಏಪ್ರಿಲ್ 14, 2021
23 °C

ನೀರಾವರಿ: ನ 23ಕ್ಕೆ ಅಡಿಗಲ್ಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಳಿಯಾರು: ಹೋಬಳಿಯ ಶೆಟ್ಟಿಕೆರೆಯಲ್ಲಿ ನ 23ರಂದು ನಡೆಯಲಿರುವ ಕುಡಿಯುವ ನೀರಿಗಾಗಿ ಹೇಮಾವತಿ ನಾಲಾ ವಲಯದಿಂದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಲವು ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಅಡಿಗಲ್ಲು ಸ್ಥಾಪಿಸುವ ಸಮಾರಂಭಕ್ಕೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಕಿರಣ್‌ಕುಮಾರ್ ತಿಳಿಸಿದರು.ತಿರುಮಲಾಪುರ ಗ್ರಾಮದ ಚಂದ್ರಮೌಳೇಶ್ವರಸ್ವಾಮಿ ದೇಗುಲದ ಆವರಣದಲ್ಲಿ ಈಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ 23 ಕೆರೆ ಹಾಗೂ ಬೋರನಕಣಿವೆ ಜಲಾಶಯಕ್ಕೆ ಕುಡಿಯುವ ನೀರಿನ ಯೋಜನೆಯಡಿ ಹೇಮಾವತಿ ನಾಲಾ ವಲಯದಿಂದ ನೀರೊದಗಿಸುವ ಸುಮಾರು ರೂ 102 ಕೋಟಿ ಮೊತ್ತದ ಯೋಜನೆಯ ಸರ್ವೆ, ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದರು.ಯೋಜನೆ ಜಾರಿಯಾದರೆ ಈ ಪ್ರದೇಶದ ಬಹುದಿನದ ನೀರಿನ ಸಮಸ್ಯೆ ತಕ್ಕಮಟ್ಟಿಗೆ ಪರಿಹಾರವಾಗುತ್ತದೆ. ಹಲವು ವರ್ಷಗಳ ರೈತರ ಕನಸು ನನಸಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಆರ್.ಸೀತಾರಾಮಯ್ಯ, ಸದಸ್ಯ ಕೆಂಕೆರೆ ನವೀನ್, ತಾಲ್ಲೂಕು ಬಿಜೆಪಿ ಕಾರ್ಯದರ್ಶಿ ಕವಿತಾ ಕಿರಣ್, ಮುಖಂಡರಾದ ರಾಜಣ್ಣ, ಲಕ್ಷ್ಮಿನರಸಿಂಹಯ್ಯ, ಕೆ.ಕೆ.ಹನುಂತಪ್ಪ, ಟಿ.ಕೆ.ಪ್ರಕಾಶ್, ಕೃಷ್ಣಮೂರ್ತಿ ಇತರರು ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.