ಸೋಮವಾರ, ಮೇ 23, 2022
20 °C

ನೀರಿಗಾಗಿ ಅಧಿಕಾರಿಗಳಿಗೆ ದಿಗ್ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೇಲೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ದಿಗ್ಬಂಧನ ಹಾಕಿದ ಘಟನೆ ತಾಲ್ಲೂಕಿನ ಬಂಟೇನಹಳ್ಳಿಯ ಗುರುವಾರ ನಡೆಯಿತು.



ಗ್ರಾಮಸಭೆ ನಡೆಸಲು ಗ್ರಾಮಕ್ಕೆ ಬಂದಿದ್ದ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ದಿಗ್ಬಂಧನ ಹಾಕುವ ಮೂಲಕ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಖಾಲಿ ಕೊಡಗಳ ಪ್ರದರ್ಶನ ನಡೆಸಿದರು.



ಗ್ರಾಮದಲ್ಲಿ ಹಲವು ತಿಂಗಳಿಂದ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಈ ವಿಚಾರವನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಗ್ರಾಮಸಭೆ ನಡೆಸಲು ಆಗಮಿಸಿದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕಮಲಾ ಚನ್ನಪ್ಪ, ಕಾರ್ಯನಿರ್ವಹಣಾಧಿಕಾರಿ ಎನ್.ಶಿವಪ್ಪ, ಜಿಲ್ಲಾ ಪಂಚಾಯಿತಿ ಸದಸ್ಯೆ ಜಿ.ಟಿ.ಇಂದಿರಾ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯ ಪರ್ವತಯ್ಯ ಅವರನ್ನು ತಡೆದ ಗ್ರಾಮದ ಮಹಿಳೆಯರು ಗ್ರಾಮಸಭೆ ನಡೆಸದಂತೆ ಆಗ್ರಹಿಸಿದರು.  ಕುಡಿಯುವ ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಗ್ರಾಮಸಭೆ ನಡೆಸಲು ಬಿಡುವುದಿಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಇಲ್ಲಿಂದ ಹೋಗಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟುಹಿಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.