ಬುಧವಾರ, ಮೇ 12, 2021
27 °C

ನೀರಿಗಾಗಿ ಕೊಡ ಹಿಡಿದು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ನಂದಿಕೂರ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಟ್ಟ ಸೀತನೂರ, ಪಾಣೇಗಾಂವ ಗ್ರಾಮಗಳು ಹಾಗೂ ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯಲ್ಲಿ ಕೊಳವೆ ಬಾವಿ ಕೊರೆಯಿಸಬೇಕು ಎಂದು ಒತ್ತಾಯಿಸಿ ಸ್ಥಳೀಯ ಗ್ರಾಮಸ್ಥರು ಗುರುವಾರ ಜಿಲ್ಲಾಧಿಕಾರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. `ಸೀತನೂರ ಗ್ರಾಮದಲ್ಲಿ ಕುಡಿವ ನೀರಿನ ಅಭಾವವಿದೆ. ಚರಂಡಿ ನೀರಲ್ಲೇ ಬಟ್ಟೆ ತೊಳೆಯಬೇಕಾದ ಸ್ಥಿತಿ ಬಂದಿದೆ. ಜಾನುವಾರುಗಳಿಗೆ ಕುಡಿಯಲು ನೀರು ಮತ್ತು ಮೇವು ಇಲ್ಲ. ಗ್ರಾಮಕ್ಕೆ ಭೇಟಿ ನೀಡಿದ್ದ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕಿ ಮೋಟಮ್ಮ  ಈ ಪರಿಸ್ಥಿತಿಯನ್ನು ಗಮನಿಸಿದ್ದಾರೆ. ಆದರೆ ತಾಲ್ಲೂಕು ಹಾಗೂ ಜಿಲ್ಲೆಯ ಅಧಿಕಾರಿಗಳಿಗೆ ಮನವಿ ನೀಡಿದರೂ ಸ್ಪಂದಿಸುತ್ತಿಲ್ಲ.~ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಅನಿತಾ ಪವನಕುಮಾರ್ ವಳಕೇರಿ ಆಪಾದಿಸಿದರು.ಈ ಭಾಗದಲ್ಲಿ ಕೊಳವೆ ಬಾವಿ ಕೊರೆಯಿಸಬೇಕು. ಟ್ಯಾಂಕ್‌ಗೆ ನೀರು ಹಾಕಲು ನಿರಂತರ 3 ಫೇಸ್ ವಿದ್ಯುತ್ ನೀಡಬೇಕು. ಆಗ ಸಮಸ್ಯೆ ಪರಿಹಾರಗೊಳ್ಳಲು ಸಾಧ್ಯ ಎಂದು ಜಿಲ್ಲಾಧಿಕಾರಿ ಅವರಿಗೆ ನೀಡಿದ ಪತ್ರದಲ್ಲಿ ಮನವಿ ಮಾಡಿದರು. ಗ್ರಾಮದ ಮಹಿಳೆಯರು ಕೊಡ ಹಿಡಿದು ಪ್ರತಿಭಟನೆ ನಡೆಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.