ನೀರಿಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

7

ನೀರಿಗೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

Published:
Updated:

ಶ್ರೀನಿವಾಸಪುರ: ಗ್ರಾಮಕ್ಕೆ ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸುವಂತೆ ಆಗ್ರಹಿಸಿ ತಾಲ್ಲೂಕಿನ ರಾಯಲ್ಪಾಡ್ ಗ್ರಾಮದ ಮಹಿಳೆಯರು ಸೋಮವಾರ ಸ್ಥಳೀಯ ಗ್ರಾ.ಪಂ. ಕಚೇರಿ ಎದುರು ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು.ಗ್ರಾಮದಲ್ಲಿ ಕುಡಿಯಲು ಯೋಗ್ಯವಾದ ನೀರನ್ನು ಹೊಂದಿರುವ ಎರಡು ಕೊಳವೆ ಬಾವಿಗಳಿವೆ. ಆದರೆ ಅವುಗಳಿಗೆ ಪಂಪ್‌ಸೆಟ್ ಅಳವಡಿಸಿಲ್ಲ. ಇರುವ ಕೈಪಂಪ್‌ಗಳು ಕೆಟ್ಟುಹೋಗಿವೆ. ಇದರಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ಬೇರೆ ಗ್ರಾಮಗಳ ಬಳಿ ಮಹಿಳೆಯರು, ಮಕ್ಕಳು ಹೋಗಿ ನೀರನ್ನು ಹೊತ್ತು ತರಬೇಕಾದ ಪರಿಸ್ಥಿತಿ ಇದೆ ಎಂದು ದೂರಿದರು.ಇನ್ನು ಬಿರುಬೇಸಿಗೆಯಲ್ಲಿ ಸಮಸ್ಯೆ ಎದುರಿಸುವುದು ಹೇಗೆ ಎಂದು ಪ್ರಶ್ನಿಸಿದ ಅವರು, ಗ್ರಾಮಕ್ಕೆ ಕುಡಿಯುವ ನೀರನ್ನು ಸಮರ್ಪಕ ಪೂರೈಸುವಂತೆ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇನ್ನು ಜನಪ್ರತಿನಿಧಿಗಳು ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕುಡಿಯುವ ನೀರಿಗಾಗಿ ನಿರ್ಮಿಸಲಾಗಿರುವ ಕೊಳವೆ ಬಾವಿಗಳಿಗೆ ಶೀಘ್ರವಾಗಿ ಪಂಪ್‌ಸೆಟ್ ಅಳವಡಿಸಬೇಕು, ಕೈಪಂಪ್‌ಗಳನ್ನು ದುರಸ್ತಿ ಮಾಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry