ಬುಧವಾರ, ಜೂನ್ 23, 2021
29 °C

ನೀರಿದೆ: ನಿರ್ವಹಣೆಗೆ ಮನಸ್ಸಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಳಂದೂರು: ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಬರವಿಲ್ಲ. ಆದರೆ, ಬೇಸಿಗೆ ಹಿನ್ನೆಲೆಯಲ್ಲಿ ಕೆಲವೆಡೆ ನಿರ್ವಹಣೆಯ ಕೊರತೆಯಿಂದ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ.ಪ್ರತಿ ಗ್ರಾಮದಲ್ಲೂ ಕೆರೆ ಇರುವುದು ತಾಲ್ಲೂಕಿನ ಹೆಗ್ಗಳಿಕೆ. ಆದರೆ, ಈಚಿನ ದಿನಗಳಲ್ಲಿ ಇಲ್ಲಿ ಅಂತರ್ಜಲಮಟ್ಟ ಕುಸಿಯುತ್ತಿರುವುದು ಆತಂಕ ಸೃಷ್ಟಿಸಿದೆ. ಬಹುತೇಕ ಕೆರೆಗಳಿಗೆ ನೀರು ತುಂಬಿಸುವ ಕಾಲುವೆಗಳು ಮುಚ್ಚಿ ಹೋಗಿರುವುದೇ ಇದಕ್ಕೆ ಮೂಲ ಕಾರಣ. ಕೆಲವೆಡೆ ಕೆರೆಗಳೇ ಒತ್ತುವರಿ ಯಾಗಿವೆ. ಕೆಲವು ಕೆರೆಗಳ ಹೂಳು ತೆಗೆಯಲಾಗಿದೆ. ಆದರೆ, ಅವುಗಳಿಗೆ ನೀರು ತುಂಬಿಸುವ ಕೆಲಸವಾಗಿಲ್ಲ. ಹಾಗಾಗಿ, ಅಕ್ಕಪಕ್ಕದ ಗ್ರಾಮಗಳಲ್ಲಿ ಅಂತರ್ಜಲಮಟ್ಟ ಕುಸಿಯಲು ಕಾರಣವಾಗಿದೆ ಎನ್ನುತ್ತಾರೆ ರೈತ ಮಹದೇವಪ್ಪ.ಗೌಡಹಳ್ಳಿ, ಯರಗಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಇಂದಿಗೂ ಕುಡಿಯುವ ನೀರಿಗೆ ಅಲೆಯುವ ಸ್ಥಿತಿ ನಿಂತಿಲ್ಲ. ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಈ ಹಿಂದೆ ಅಳವಡಿಸಲಾಗಿರುವ ನೀರಿನ ತೊಂಬೆಗಳಿಗೆ ಇನ್ನೂ ಸಂಪರ್ಕ ನೀಡಿಲ್ಲ. ಇವುಗಳು ಸ್ಮಾರಕಗಳಂತೆ ಗೋಚರಿಸುತ್ತಿವೆ. ತೊಂಬೆಗಳು ಭರ್ತಿಯಾಗದಿರುವ ಪರಿಣಾಮ ನಾಗರಿಕರು ಸಂಕಷ್ಟಕ್ಕೆ ತುತ್ತಾಗಿದ್ದಾರೆ.ಬೇಸಿಗೆಯಲ್ಲಿ ತಲೆದೋರುವ ನೀರಿನ ಸಮಸ್ಯೆ ಎದುರಿಸಲು ತಾಲ್ಲೂಕು ಆಡಳಿತ ಸಂಪೂರ್ಣ ಸಜ್ಜಾಗುವಂತೆ ಶಾಸಕರು ಬರಪರಿಹಾರ ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ರವಾನಿಸಿದ್ದಾರೆ. ಈ ನಿಟ್ಟಿನಲ್ಲಿ ಅಧಿಕಾರಶಾಹಿ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂಬುದು ಗ್ರಾಮೀಣರ ಒತ್ತಾಯ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.