ಮಂಗಳವಾರ, ಏಪ್ರಿಲ್ 20, 2021
31 °C

ನೀರಿನಲ್ಲಿ ಮುಳುಗಿ ಬಾಲಕನ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು:  ಸ್ನೇಹಿತರ ಜತೆ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಲಹಂಕ ಬಳಿಯ ಹುಣಸಮಾರನಹಳ್ಳಿ ಕೆರೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.ಯಲಹಂಕ ಸಮೀಪದ ಭಾರತಿನಗರ ನಿವಾಸಿ ಬಬ್ಲು ಎಂಬುವರ ಪುತ್ರ ಹರೀಶ್‌ಕುಮಾರ್ (14) ಮೃತಪಟ್ಟವನು. ಆತ ಖಾಸಗಿ ಶಾಲೆಯೊಂದರಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ. ಬಬ್ಲು, ಹೋಟೆಲ್ ಒಂದರಲ್ಲಿ ಅಡುಗೆ ಕೆಲಸ ಮಾಡುತ್ತಾರೆ.ಅಕ್ಕಪಕ್ಕದ ಮನೆಯ ಸ್ನೇಹಿತರೊಂದಿಗೆ ಹುಣಸಮಾರನಹಳ್ಳಿ ಕೆರೆಯಲ್ಲಿ ಈಜಲು ಹೋಗಿದ್ದ ಹರೀಶ್‌ಕುಮಾರ್ ನೀರಿನಲ್ಲಿ ಮುಳುಗಿದ್ದಾನೆ. ಇದರಿಂದ ಗಾಬರಿಯಾದ ಸ್ನೇಹಿತರು ಮನೆಗೆ ಬಂದು ಪೋಷಕರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೋಷಕರು, ಸ್ಥಳೀಯರ ಜತೆ ಸೇರಿಕೊಂಡು ಕೆರೆಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾಗ ಬಾಲಕನ ಶವ ಪತ್ತೆಯಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಪೋಷಕರಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಯಲಹಂಕ ಠಾಣೆಯಲ್ಲಿ ದೂರು ದಾಖಲಾಗಿದೆ.ಆತ್ಮಹತ್ಯೆ: ಯಲಹಂಕ ಉಪನಗರ ಸಮೀಪದ ಶಾರದಾನಗರ ನಿವಾಸಿ ಪ್ರಕಾಶ್ (22) ಎಂಬುವರು ಶನಿವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೂಲತಃ ಗುಲ್ಬರ್ಗ ಜಿಲ್ಲೆಯವರಾದ ಅವರು ಕುಟುಂಬ ಸದಸ್ಯರೊಂದಿಗೆ ಶಾರದಾನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಯಲಹಂಕ ಉಪನಗರದ `ಬಿ~ ಸೆಕ್ಟರ್‌ನಲ್ಲಿ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರ ಮನೆ ಇದ್ದು, ಪ್ರಕಾಶ್ ಆ ಮನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.ನಿವೃತ್ತ ಐಎಎಸ್ ಅಧಿಕಾರಿ ಕುಟುಂಬ ಸದಸ್ಯರೊಂದಿಗೆ ಬೇರೆಡೆ ನೆಲೆಸಿದ್ದರಿಂದ ಯಲಹಂಕ `ಬಿ~ ಸೆಕ್ಟರ್‌ನಲ್ಲಿನ ಮನೆ ಖಾಲಿ ಇತ್ತು. ಪ್ರತಿನಿತ್ಯದಂತೆ ರಾತ್ರಿ ಆ ಮನೆಯ ಬಳಿ ಕಾವಲು ಕಾಯಲು ಬಂದಿದ್ದ ಪ್ರಕಾಶ್, ಮನೆಯ ಆವರಣದಲ್ಲಿನ ಮರವೊಂದಕ್ಕೆ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಯಲಹಂಕ ಉಪನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.