ಬುಧವಾರ, ಮೇ 18, 2022
24 °C

ನೀರಿನಲ್ಲಿ ವಿದ್ಯುತ್ ತಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ: ಪಟ್ಟಣದ ಚಿತ್ರಾವತಿ ಕಣಜದ ರಸ್ತೆಯಲ್ಲಿರುವ 20 ಹಾಗೂ 21ನೇ ವಾರ್ಡ್‌ನಲ್ಲಿ ಕುಡಿಯುವ ನೀರಿನ ಬೋರ್‌ವೆಲ್‌ಗೆ ಸಂಪರ್ಕ ಕಲ್ಪಿಸಿರುವ ವಿದ್ಯುತ್ ತಂತಿಗಳು ನೀರಿನಲ್ಲಿ ತೋಯ್ದು ಅಪಾಯಕ್ಕೆ ಎಡೆಮಾಡಿಕೊಟ್ಟಿದೆ.ಇಲ್ಲಿ ಪುರಸಭೆ ವತಿಯಿಂದ ಕೊಳವೆ ಬಾವಿ ಕೊರೆಸಲಾಗಿದ್ದು, ಒಂದು ಕಡೆ ಕೊಳವೆ ಬಾವಿ ಪೈಪು ಮುರಿದಿರುವುದರಿಂದ ಕುಡಿಯುವ ನೀರು ಪೋಲಾಗುತ್ತಿದೆ. ಮತ್ತೊಂದೆಡೆ ವಿದ್ಯುತ್ ತಂತಿಗಳು ನೀರಿನಲ್ಲಿ ತೊಯ್ದು ವಿದ್ಯುತ್ ಪ್ರವಹಿಸುತ್ತಿದೆ. ಸಾರ್ವಜನಿಕರು ಕುಡಿಯಲು ಇಲ್ಲಿಂದಲೇ ನೀರು ತೆಗೆದುಕೊಂಡು ಹೋಗುವುದರಿಂದ ಅಪಾಯಕಾರಿ ಯಾಗಿದೆ.ಹರಿದ ವಿದ್ಯುತ್ ತಂತಿಗಳನ್ನು ಸರಿಪಡಿಸದೆ ಸಂಬಂಧಿಸಿದವರು ನಿರ್ಲಕ್ಷ್ಯ ತಾಳಿದ್ದಾರೆ. ಪುರಸಭಾ ಅಧಿಕಾರಿಗಳು ಹಾಗೂ ಸದಸ್ಯರು ಇತ್ತ ಗಮನ ಹರಿಸಿ ವಿದ್ಯುತ್ ಅವಘಡ ತಪ್ಪಿಸಬೇಕು ಎಂದು ವಾರ್ಡ್‌ನ ನಿವಾಸಿ ಆಂಜನೇಯರೆಡ್ಡಿ ಆಗ್ರಹಿ ಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.