ಗುರುವಾರ , ಜೂನ್ 17, 2021
26 °C

ನೀರಿನ ಅಭಾವ: ಎತ್ತಿನಹೊಳೆ ಯೋಜನೆ ಜಾರಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಎತ್ತಿನಹೊಳೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಬೇಕು ಎಂದು ಭಾರತ ಜನ ಜಾಗೃತಿ ಸೇನೆಯ ರಾಜ್ಯ ಘಟಕವು ಒತ್ತಾಯಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾಧ್ಯಕ್ಷ ಅಶ್ವತ್ಥಪ್ಪ, ಅಂತರ್ಜಲ ಮಟ್ಟ ದಿನೆ ದಿನೇ ಕುಸಿಯುತ್ತಿರುವುದರಿಂದ ಕೊಳವೆಬಾವಿಗಳು ಬತ್ತಿ ಹೋಗಿ ಈ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಬೇಸಿಗೆಯಲ್ಲಿ ತೀವ್ರ ಬವಣೆ ಎದುರಾಗಿದೆ. ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಾದರೆ ಎತ್ತಿನಹೊಳೆ ಯೋಜನೆ ಜಾರಿಯೊಂದೇ ಉಳಿದಿರುವ ಮಾರ್ಗ ಎಂದರು.`ವಿದೇಶಿ ರೇಷ್ಮೆ ಆಮದಿನಿಂದ ಸ್ಥಳೀಯ ರೇಷ್ಮೆ ಬೆಲೆ ಪಾತಾಳ ಮುಟ್ಟಿದೆ. ದೇಸಿ ರೇಷ್ಮೆಯ ಮಹತ್ವ ಉಳಿಸುವ ಮೂಲಕ ರೇಷ್ಮೆ ಬೆಳೆಗಾರರಿಗೆ ಸೂಕ್ತ ಬೆಲೆ ದೊರಕುವಂತೆ ಮಾಡಲು ವಿದೇಶಿ ರೇಷ್ಮೆಗೆ ಹೆಚ್ಚಿನ ಆಮದು ಸುಂಕ ವಿಧಿಸಬೇಕು~ ಎಂದು ಅವರು ಆಗ್ರಹಿಸಿದರು.ಗೋಷ್ಠಿಯಲ್ಲಿ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಸಿ.ಮುನಿಯಪ್ಪ, ಮಹಿಳಾ ಘಟಕದ ಅಧ್ಯಕ್ಷೆ ಪ್ರಭಾವತಿ ಶ್ರೀನಿವಾಸ್, ಜಿಲ್ಲಾ ಕಾರ್ಯಾಧ್ಯಕ್ಷ ಎಂ.ತಿರುಪಳ್ಳಪ್ಪ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.