ಶಿವಮೊಗ್ಗ: ಜಿಲ್ಲೆಯಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಪಡಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಸಜ್ಜಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ವಿ. ವೇದಮೂರ್ತಿ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥ ಕುರಿತ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ತಾಲ್ಲೂಕು ಟಾಸ್ಕ್ಪೋರ್ಸ್ ಸಮಿತಿ ಬೇಡಿಕೆ ಅನ್ವಯ ತಾಲ್ಲೂಕುವಾರು ಅನುದಾನ ಬಿಡುಗಡೆ ಮಾಡಲಾಗಿದೆಯಲ್ಲದೆ, ಅಗತ್ಯ ಬಿದ್ದಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.

ಶಿವಮೊಗ್ಗ ತಾಲ್ಲೂಕಿನಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥಕ್ಕೆ ಈಗಾಗಲರೂೇ 30.21 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಕೈಗೊಳ್ಳಲಾಗಿದ್ದ 31 ಕಾಮಗಾರಿಗಳ ಪೈಕಿ 22 ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿಕೆ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.

ಭದ್ರಾವತಿ ತಾಲ್ಲೂಕಿಗೆ ರೂ 8.39 ಲಕ್ಷ ಅನುದಾನ ನೀಡಿದ್ದು, 12 ಕಾಮಗಾರಿಗಳು ಪೂರ್ಣಗೊಂಡಿವೆ. ತೀರ್ಥಹಳ್ಳಿ ತಾಲ್ಲೂಕಿಗೆ ಒಟ್ಟು ರೂ 68.33 ಲಕ್ಷ ಅನುದಾನ ನೀಡಿದ್ದು, 11 ಕಾಮಗಾರಿಗಳು ಪೂರ್ಣಗೊಂಡಿವೆ.

ಸಾಗರ ತಾಲ್ಲೂಕಿಗೆ ಈಗಾಗಲರೂೇ 9.83 ಲಕ್ಷ ಅನುದಾನ ನೀಡಿದ್ದು, ತಕ್ಷಣವೇ ರೂ 15 ಲಕ್ಷ ನೀಡಲಾಗುವುದು ಎಂದ ಜಿಲ್ಲಾಧಿಕಾರಿ, ಸೊರಬ ತಾಲ್ಲೂಕಿಗೆ ಪ್ರಥಮ ಕಂತಾಗಿ ಬಿಡುಗಡೆಯಾಗಿದ್ದ ರೂ 8.33 ಲಕ್ಷ ಅನುದಾನದಲ್ಲಿ 6 ಕಾಮಗಾರಿ ಪೂರ್ಣಗೊಳಿಸಲಾಗಿದೆ. ತುರ್ತಾಗಿ ರೂ 10 ಲಕ್ಷ ಬಿಡುಗಡೆ ಮಾಡುವುದಾಗಿ ತಿಳಿಸಿದರು.

ಶಿಕಾರಿಪುರ ತಾಲ್ಲೂಕಿಗೆ ರೂ 20 ಲಕ್ಷ ಅನುದಾನ ಒದಗಿಸಿದ್ದು, 18 ಕಾಮಗಾರಿ ಕೈಗೊಳ್ಳಲಾಗಿದೆ. ಹೊಸನಗರ ತಾಲ್ಲೂಕಿಗೆ ರೂ 60 ಲಕ್ಷ ಅನುದಾನ ನೀಡಿದ್ದು, ನೀರಿನ ಸಮಸ್ಯೆಯಿರುವ ಗ್ರಾಮಗಳಿಗೆ ತುರ್ತಾಗಿ ವ್ಯವಸ್ಥೆ ಕಲ್ಪಿಸಲು ಅನುದಾನ ಬಳಸಿಕೊಳ್ಳುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಮೇವಿನ ಸಮಸ್ಯೆ ಉಲ್ಬಣಿಸದಂತೆ ಮುಂಜಾಗ್ರತೆ ವಹಿಸಲು ರೂ 25 ಲಕ್ಷ ಅನುದಾನ ಬಿಡುಗಡೆ ಮಾಡಿದ್ದು, ಮೇವು ಬೆಳೆಯಲು ಮುಂದಾಗುವ ರೈತರಿಗೆ ಮೇವಿನ ಬೀಜ ಒದಗಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಸಂಜಯ್ ಬಿಜ್ಜೂರ್ ಮಾತನಾಡಿ, ಮಂಜೂರಾತಿ ಅನುದಾನ ಬಿಡುಗಡೆ ಇತ್ಯಾದಿಗಳಿಗಾಗಿ ಕಾಯದೇ ಸಮಸ್ಯಾತ್ಮಕ ಗ್ರಾಮಗಳಿಗೆ ತುರ್ತಾಗಿ ನೀರು ಒದಗಿಸಬೇಕು. ಅನಿವಾರ್ಯವಿದ್ದಲ್ಲಿ ಮಾತ್ರ ಕೊಳವೆ ಬಾವಿಗಳನ್ನು ಕೊರೆಸಬೇಕು. ಇಲ್ಲವಾದರೆ, ಪರ್ಯಾಯ ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಎ. ಹನುಮನರಸಯ್ಯ ಮಾತನಾಡಿ, ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಶಾಸಕರು ಹಾಗೂ ಜಿಲ್ಲಾ ಪಂಚಾಯ್ತಿ ಸದಸ್ಯರ ಗಮನಕ್ಕೆ ತಂದು ತ್ವರಿತವಾಗಿ ಇತ್ಯರ್ಥ ಪಡಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ, ಹಿರಿಯ ಉಪ ವಿಭಾಗಾಧಿಕಾರಿ ಎಂ.ಎನ್. ವೈಶಾಲಿ, ಉಪ ವಿಭಾಗಾಧಿಕಾರಿ ಪ್ರವೀಣ್ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.