ರಾಮನಗರ: ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಇದೇ 30ರೊಳಗೆ ನಗರಸಭೆ ಮತ್ತು ಜಲಮಂಡಳಿ ಸೂಕ್ತ ಕ್ರಮ ಜರುಗಿಸದಿದ್ದರೆ ಕಾಂಗ್ರೆಸ್ ಪಕ್ಷ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಎಚ್ಚರಿಸಿದೆ.ಬೇಸಿಗೆಯ ಬಿಸಿಲು ಹೆಚ್ಚುತ್ತಿರುವಂತೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ತೀವ್ರವಾಗಿದೆ. ಜನರು ನೀರಿಗಾಗಿ ಪರದಾಡುವ ಸ್ಥಿತಿ ಬಂದಿದೆ. ಆದರೆ ನಗರಸಭೆ ಕುಡಿಯುವ ನೀರು ಸೇರಿದಂತೆ ಜನತೆಗೆ ಮೂಲ ಸೌಕರ್ಯ ಒದಗಿಸುವುದರಲ್ಲಿ ವಿಫಲವಾಗಿದೆ ಎಂದು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ಎನ್.ವೆಂಕಟೇಶ್ ಪ್ರಕಟಣೆಯಲ್ಲಿ ದೂರಿದ್ದಾರೆ.

ಜಲಮಂಡಳಿ ನಗರ ಪ್ರದೇಶದಲ್ಲಿ ವಾರಕ್ಕೊಮ್ಮೆ ಕೇವಲ ಒಂದೆರಡು ಗಂಟೆ ಕುಡಿಯುವ ನೀರನ್ನು ಪೂರೈಸುತ್ತಿದೆ. ನಗರದ ಪ್ರತಿ ಬಡಾವಣೆಯ ನೀರಿನ ಬೇಡಿಕೆಯ ಬಗ್ಗೆ ತಿಳುವಳಿಕೆ ಇಲ್ಲದಿರುವುದರಿಂದ ಸಮರ್ಪಕವಾಗಿ ನೀರು ಸರಬರಾಜು ಮಾಡುವಲ್ಲಿ ಜಲಮಂಡಳಿ ಅಧಿಕಾರಿಗಳು ವಿಫಲವಾಗಿದ್ದಾರೆ. ಆದ್ದರಿಂದ ಕೂಡಲೇ ವೈಜ್ಞಾನಿಕ ಅಧ್ಯಯನ ನಡೆಸಿ, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

ಬೇಸಿಗೆ ಸಂದರ್ಭದಲ್ಲಿ ಜನರಿಗೆ ಉಪಯೋಗವಾಗುತ್ತಿದ್ದ ಮಿನಿ ವಾಟರ್ ಟ್ಯಾಂಕ್ಗಳನ್ನು ತೆರವುಗೊಳಿಸಿರುವುದು, ನಗರ ಪ್ರದೇಶದಲ್ಲಿ ಲಭ್ಯವಿರುವ ಕೊಳವೆ ಬಾವಿಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವುದು ಮತ್ತು ಚನ್ನಪಟ್ಟಣದ ಮೂಲಕ ನಗರಕ್ಕೆ ಬರುತ್ತಿರುವ ಕಾವೇರಿ ನದಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿರುವುದಕ್ಕೆ ನಗರಸಭೆ ಕಾರಣವಾಗಿದೆ. ಕೂಡಲೇ ಈ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.