ಗುರುವಾರ , ಮೇ 26, 2022
32 °C

ನೀರಿನ ಸಮಸ್ಯೆ: ತುರ್ತು ಸಭೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ದೊಡ್ಡಬಳ್ಳಾಪುರ: ಕುಡಿಯುವ ನೀರಿನ ಸಮಸ್ಯೆ ಮತ್ತು ನೈರ್ಮಲ್ಯದ ಬಗ್ಗೆ ಚರ್ಚಿಸಲು ನಗರಸಭೆಯ ವಿಶೇಷ ಸಭೆ ಕರೆಯಬೇಕು ಎಂದು ಕನ್ನಡ ಪಕ್ಷದ ನಗರಸಭಾ ಸದಸ್ಯರಾದ ಮಂಜುಳಾ ಮತ್ತು ಜಯಮ್ಮ ನಗರಸಭೆ ಅಧಕ್ಷರನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಬೋರ್‌ವೆಲ್‌ಗಳೇ ನೀರಿಗೆ ಆಧಾರವಾಗಿವೆ. ಕುಡಿಯುವ ನೀರಿಗಾಗಿ ಟ್ಯಾಂಕರ್‌ಗಳನ್ನು ಅವಲಂಬಿಸಬೇಕಾಗಿದ್ದು, ನೀರಿನ ವ್ಯವಸ್ಥೆಗಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಿದೆ.

 ಭುವನೇಶ್ವರಿ ನಗರ, ಸಂಜಯ ನಗರಗಳಲ್ಲಿ ನೈರ್ಮಲ್ಯದ ಸಮಸ್ಯೆ ಹೆಚ್ಚಾಗಿದೆ. ಇಲ್ಲಿ ಪೌರ ಕಾರ್ಮಿಕರ ಕೊರತೆಯಿರುವುದರಿಂದ ಗುತ್ತಿಗೆ ಆಧಾರದ ಮೇಲೆ ಹೆಚ್ಚು ಕಾರ್ಮಿಕರ ಮೂಲಕ ಕಾಮಗಾರಿ ಕೈಗೊಳ್ಳಬೇಕಿದೆ. ಒಳ ಚರಂಡಿ ಕಾಮಗಾರಿಗಳಿಂದಾಗಿ ದೂಳು ಹೆಚ್ಚಾಗಿದೆ. ಈ ದಿಸೆಯಲ್ಲಿ ಮೂಲ ಸೌಕರ್ಯಗಳ ಕುರಿತು ಚರ್ಚಿಸಲು ಸಭೆ ಕರೆಯಬೇಕೆಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.