ಶುಕ್ರವಾರ, ಮೇ 7, 2021
22 °C

ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಅರಾಭಿ ಕೊತ್ತನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಡದೇನಹಳ್ಳಿಯ ನಿವಾಸಿ ಗಳು ಗ್ರಾಮ ಪಂಚಾಯಿತಿ ಸದಸ್ಯರ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಶನಿವಾರ ಖಾಲಿ ಬಿಂದಿಗೆಗಳನ್ನು ಪ್ರದರ್ಶಿಸಿ ಧರಣಿ ನಡೆಸಿದರು.`ಗ್ರಾಮಕ್ಕೆ ನೀರು ಪೂರೈಸುತ್ತಿದ್ದ ಕೊಳವೆಬಾವಿ 15 ದಿನದ ಹಿಂದೆ ಬತ್ತಿ ಹೋಗಿದೆ. ಅಂದಿನಿಂದಲೂ ನೀರಿನ ಸಮಸ್ಯೆ ತೀವ್ರವಾಗಿದ್ದು ಪರದಾಡು ವಂತಾಗಿದೆ.  1 ಕಿಮೀ ದೂರದಲ್ಲಿರುವ ಖಾಸಗಿ ತೋಟಗಳ ಕೊಳವೆ ಬಾವಿ ಗಳಿಂದ ನೀರು ತರಬೇಕಾಗಿದೆ~ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿಗೆ ಜಿಲ್ಲಾ ಡಳಿತ ಸೂಚಿಸಬೇಕು. ಇಲ್ಲವಾದರೆ ಸನ್ನಿವೇಶ ಇನ್ನಷ್ಟು ಬಿಗಡಾಯಿಸಿ ಜನರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತ ಪಡಿಸಿದರು.ಮನವಿ ಸ್ವೀಕರಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಎಸ್.ಪೆದ್ದಪ್ಪಯ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಗ್ರಾಪಂ ಸದಸ್ಯರಾದ ಮುನಿರಾಜು, ವೆಂಕಟೇಶ್ ಮತ್ತು ನಾಗರಾಜ್ ನೇತೃತ್ವ ವಹಿ ಸಿದ್ದರು. ಮಹಿಳೆಯರು ಹೆಚ್ಚಿನ ಸಂಖ್ಯೆ ಯಲ್ಲಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.